Publish Date: Thu, 23 May 2019 (12:55 IST)
Updated Date: Thu, 23 May 2019 (12:58 IST)
ಅಮರಾವತಿ: ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಟಿಡಿಪಿ ಹೀನಾಯ ಸೋಲಿನತ್ತ ಸಾಗಿದೆ. ಹೀಗಾಗಿ ಇದರ ನೈತಿಕ ಹೊಣೆ ಹೊತ್ತು ಚಂದ್ರಬಾಬು ನಾಯ್ಡು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಗುರುವಾರ ಸಂಜೆ ಆಂಧ್ರಪ್ರದೇಶದ ರಾಜ್ಯಪಾಲರನ್ನು ಭೇಟಿ ಮಾಡಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಚಂದ್ರಬಾಬು ನಾಯ್ಡು.
ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ ಆರ್ ಕಾಂಗ್ರೆಸ್ ಮುನ್ನಡೆಯಲ್ಲಿದೆ. ಸದ್ಯದಲ್ಲೇ ಜಗನ್ ಮೋಹನ್ ರೆಡ್ಡಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ಮೇ ಮೂವತ್ತನೇ ತಾರೀಕಿಗೆ ಜಗನ್ ಮೋಹನ್ ರೆಡ್ಡಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಬಗ್ಗೆ ಮಾತು ಕೂಡ ಇದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.