Select Your Language

Notifications

webdunia
webdunia
webdunia
webdunia

ಸಿಎಂ ಕುಮಾರಸ್ವಾಮಿಯಿಂದ ನೀತಿ ಸಂಹಿತೆ ಉಲ್ಲಂಘನೆ

ಸಿಎಂ ಕುಮಾರಸ್ವಾಮಿಯಿಂದ ನೀತಿ ಸಂಹಿತೆ ಉಲ್ಲಂಘನೆ
ತುಮಕೂರು , ಮಂಗಳವಾರ, 2 ಏಪ್ರಿಲ್ 2019 (11:04 IST)
ತುಮಕೂರು : ಚುನಾವಣಾ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೂಡ ಸಭೆಯೊಂದರಲ್ಲಿ ಯೋಜನೆಗಳನ್ನು  ಘೋಷಣೆ ಮಾಡುವ ಮೂಲಕ ಸಿಎಂ ಕುಮಾರಸ್ವಾಮಿ ಅವರು ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.


ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು, ಒಣಗಿ ಹೋದ ತೆಂಗಿನ ಮರಕ್ಕೆ 400 ರೂ ಪರಿಹಾರ ಈಗಾಗಲೇ ಕೊಡುತಿದ್ದೇವೆ. ಅದು ಸಾಕಾಗಲ್ಲ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಜಯಚಂದ್ರ ಅವರು 400 ರಿಂದ 1000 ರೂ. ಗೆ ಏರಿಕೆ ಮಾಡಬೇಕು ಅಂದಿದ್ದಾರೆ. ಆ ಕುರಿತು ಚುನಾವಣೆ ಮುಗಿದ ಬಳಿಕ ನೋಡೋಣ ಎಂದು ಪರೋಕ್ಷವಾಗಿ 1000 ರೂ. ಕೊಡುವ ಭರವಸೆ ಸಿಎಂ ನೀಡಿದ್ದಾರೆ.


ಅಷ್ಟೇ ಅಲ್ಲದೇ ಭದ್ರಾ ಮೇಲ್ದಂಡೆ ನೀರನ್ನು ಶಿರಾ ಚಿಕ್ಕನಾಯಕನಹಳ್ಳಿಗೆ ಹರಿಸುತ್ತೇನೆ. 8 ರಿಂದ 10 ತಿಂಗಳ ಅವಕಾಶ ಕೊಡಿ. ಚಿಕ್ಕನಾಯಕನಹಳ್ಳಿ ತಾಲೂಕಿನ ಕೆರೆಕಟ್ಟೆ ತುಂಬಿಸುವ ಕೆಲಸ ಮಾಡಬೇಕಿದೆ. ನೀತಿ ಸಂಹಿತೆ ಇರುವುದರಿಂದ ಹೆಚ್ಚಿಗೆ ಹೇಳಿಕೆ ಆಗೋಲ್ಲ ಎಂದು ಹೇಳಿದ್ದರು.  ಈ ಮೂಲಕ ಸಿಎಂ ಕುಮಾರಸ್ವಾಮಿ ಅವರು ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

Share this Story:

Follow Webdunia kannada

ಮುಂದಿನ ಸುದ್ದಿ

ಧರ್ಮಸ್ಥಳ ಮಂಜುನಾಥನ ಮೊರೆ ಹೋದ ಸುಮಲತಾ ಅಂಬರೀಶ್