Publish Date: Thu, 18 Apr 2019 (12:51 IST)
Updated Date: Thu, 18 Apr 2019 (12:53 IST)
ಕೋಲಾರ : ಇಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಇದೀಗ ಕೋಲಾರದ ಮತಗಟ್ಟೆಯೊಂದರ ಬಳಿ ಹಣ ಹಂಚಿಕೆಯ ಪ್ರಕರಣ ನಡೆದಿರುವುದಾಗಿ ತಿಳಿದುಬಂದಿದೆ.
ಕಾಂಗ್ರೆಸ್ ಕಾರ್ಯಕರ್ತ ಪುಣ್ಯಮೂರ್ತಿ ಎಂಬುವವರು ಕೆಜಿಎಫ್ ನ ಸ್ವರ್ಣ ನಗರಮತಗಟ್ಟೆ ಸಂಖ್ಯೆ 22ರಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡುತ್ತಿದ್ದರು.
ಈ ಘಟನೆ ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿದ ಪೊಲೀಸರು ತಕ್ಷಣ ಹಣ ಹಂಚಿಕೆ ಮಾಡುತ್ತಿದ್ದ ವೇಳೆ ವ್ಯಕ್ತಿಯ ಬಳಿ ಇದ್ದ ಬೈಕ್ ,ಹಣವನ್ನು ವಶಕ್ಕೆ ಪಡೆದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.