Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಶಾಸಕರು ಓಡಿ ಹೋಗಲ್ವಂತೆ!

ಕಾಂಗ್ರೆಸ್ ಶಾಸಕರು ಓಡಿ ಹೋಗಲ್ವಂತೆ!
ಬೆಂಗಳೂರು , ಮಂಗಳವಾರ, 23 ಏಪ್ರಿಲ್ 2019 (16:43 IST)
ನಮ್ಮ ಪಕ್ಷದಿಂದ ಬಿಜೆಪಿಗೆ ಶಾಸಕರು ಓಡಿ ಹೋಗುತ್ತಾರೆ ಎಂಬುದು ಸುಳ್ಳು. ಯಾರೂ ಹೋಗಲ್ಲ. ಅಸಮಾಧಾನ ಇರುವ ಶಾಸಕರ ಮನವೊಲಿಕೆ ಮಾಡಲಿದ್ದೇವೆ. ಹೀಗಂತ ಡಿಸಿಎಂ ಹೇಳಿದ್ದಾರೆ.

ರಮೇಶ್ ಜಾರಕಿಹೋಳಿ ಅವರು ಯಾವ ಕಾರಣಕ್ಕೆ ರಾಜೀನಾಮೆ ನೀಡುತ್ತೇನೆಂದು ಹೇಳಿದ್ದಾರೋ ತಿಳಿದಿಲ್ಲ. ಅವರ ಮನವೊಲಿಕೆಗೆ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಕೂಡ ಪ್ರಯತ್ನ ಪಟ್ಟಿದ್ದಾರೆ. ನಾನೂ ಕೂಡ ಅವರೊಂದಿಗೆ ಮಾತನಾಡಲಿದ್ದೇನೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.

webdunia
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ ಹಾಕಿದ ಬಳಿಕ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಅವರಿಗೆ ನಮ್ಮ ಪಕ್ಷ ಸಚಿವ ಸ್ಥಾನ ಹಾಗೂ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನೂ ಮೊದಲೇ ನೀಡಿತ್ತು. ಆದಾಗ್ಯು ಅವರು ರಾಜೀನಾಮೆ ಕೊಡುವ ಕಾರಣ ಸ್ಪಷ್ಟವಾಗಿಲ್ಲ. 

ಕೆಲ ಕಾರಣದಿಂದ ಸಚಿವ ಸ್ಥಾನ ಹಿಂಪಡೆಯಲಾಗಿತ್ತು. ಆದರೆ, ಮತ್ತೆ ಅವರಿಗೆ ರಾಜಕೀಯವಾಗಿ ಜವಾಬ್ದಾರಿಗಳನ್ನು ಪಕ್ಷ ಕೊಡುತ್ತದೆ. ಮಂತ್ರಿ ಸ್ಥಾನ ತೆಗೆದಿದ್ದೇ ರಾಜೀನಾಮೆಗೆ ಕಾರಣವಾದರೆ ನಮ್ಮ ಮುಖಂಡರು ಅವರೊಂದಿಗೆ ಮಾತನಾಡಲಿದ್ದಾರೆ ಎಂದರು.

ಸರಕಾರ ಬಿದ್ದು ಹೋಗತ್ತೆ ಎಂದು ಬಹಳಷ್ಟು ಜನ ಆಸೆ ಇಟ್ಟುಕೊಂಡಿದ್ದಾರೆ. ಮಂತ್ರಿ, ಮುಖ್ಯಮಂತ್ರಿ ಆಗಬೇಕೆಂಬ ಕನಸು ಕಂಡಿದ್ದಾರೆ. ಆದರೆ, ನಮ್ಮ ಸರಕಾರ ಸುಭದ್ರವಾಗಿರುತ್ತದೆ. ಯಾವುದೇ ಕಾರಣಕ್ಕೂ ಸರಕಾರ ಪತನವಾಗುವುದಿಲ್ಲ ಎಂದು ಹೇಳಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಕಾರ್ಯಕರ್ತರಿಗೆ ಲಾಠಿ ರುಚಿ ತೋರಿಸಿದ ಖಾಕಿ ಪಡೆ