ಬೆಂಗಳೂರು : ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೀಳಿಯುತ್ತಿರುವ ತೇಜಸ್ವಿ ಸೂರ್ಯ ಅವರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಆಡಿಯೋ ಸಿಡಿಯೊಂದನ್ನು ಬಿಡುಗಡೆ ಮಾಡಿದ್ದಾರೆ.
									
								
			        							
								
																	
ಬಿಡುಗಡೆಯಾಗಿರುವ ಈ ಆಡಿಯೋದಲ್ಲಿ ತೇಜಸ್ವಿ ಸೂರ್ಯ ಅವರ ಮಾಜಿ ಗೆಳತಿ ಎನ್ನಲಾಗುತ್ತಿರುವ ಡಾ. ಸೋಮ್ ದತ್ ಅವರು ಮಾಧ್ಯಮ ಪ್ರತಿನಿಧಿಯೊಂದಿಗೆ ತೇಜಸ್ವಿ ಸೂರ್ಯ ಅವರಿಗೆ ಸಂಬಂಧಪಟ್ಟ ಕೆಲವು ಮಹತ್ವದ ಮಾಹಿತಿಗಳನ್ನು ಬಹಿರಂಗ ಪಡಿಸಿದ್ದಾರೆ.
									
										
								
																	
ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ವಕ್ತಾರ ಬಿಜ್ರೇಶ್ ಕಾಳಪ್ಪನವರು ಬಿಜೆಪಿಗೆ ಇದೆಲ್ಲ ತಿಳಿದಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿಯಿಂದ ಕಣದಲ್ಲಿರುವ ತೇಜಸ್ವಿ ಸೂರ್ಯ ಅವರ ವಿರುದ್ದ ಲೈಂಗಿಕ ಕಿರುಕುಳ ನೀಡಿರುವ ಆರೋಪವಿದೆ. ಇದೆಲ್ಲ ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ತಿಳಿದಿದೆ ಅಂತ ಹೇಳಿದ್ದಾರೆ.
									
											
							                     
							
							
			        							
								
																	
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ 
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.