Select Your Language

Notifications

webdunia
webdunia
webdunia
Wednesday, 9 April 2025
webdunia

ಮತ ಚಲಾಯಿಸಿದ ಸದಾನಂದಗೌಡರು ಬೆಂಗಳೂರಿನ ಜನಕ್ಕೆ ಹೇಳಿದ್ದೇನು ಗೊತ್ತಾ?

ಬೆಂಗಳೂರು
ಬೆಂಗಳೂರು , ಗುರುವಾರ, 18 ಏಪ್ರಿಲ್ 2019 (08:25 IST)
ಬೆಂಗಳೂರು : ಇಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಬೆಂಗಳೂರಿನವರ ಮೇಲಿನ  ಅಪವಾದವನ್ನು ಅಳಿಸಿ ಹಾಕಲು ಎಲ್ಲರೂ ತಪ್ಪದೇ ಮತದಾನ ಮಾಡಬೇಕು ಎಂದು ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡರು ಮನವಿ ಮಾಡಿದ್ದಾರೆ.


ಡಿ.ವಿ.ಸದಾನಂದಗೌಡ ಅವರು ಕುಟುಂಬ ಸಮೇತರಾಗಿ ಹೆಬ್ಬಾಳದ ಭೂಪಸಂದ್ರದ ಮತಗಟ್ಟೆಯಲ್ಲಿ ಮತ ಚಲಾಯಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ವಿದ್ಯಾವಂತರು ಮತದಾನ ಮಾಡುವುದಿಲ್ಲವೆಂದು ಅಪವಾದವಿದೆ. ಈ ಅಪವಾದವನ್ನು ಅಳಿಸಿ ಹಾಕಲು ಎಲ್ಲರೂ ತಪ್ಪದೇ ಮತದಾನ ಮಾಡಬೇಕು ಎಂದು ಮನವಿ ಮಾಡಿದ್ದಾರೆ.


ಬೆಂಗಳೂರಿನ ಜನರು ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡಬೇಕು. ಈ ಮೂಲಕ ಪ್ರಜಾತಂತ್ರ ವ್ಯವಸ್ಥೆಗೆ ಗೌರವ ನೀಡಬೇಕು ಎಂದು ಅವರು ಕೇಳಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಮತದಾನ