Select Your Language

Notifications

webdunia
webdunia
webdunia
webdunia

ವೆಲ್ಲೂರು ಲೋಕಸಭಾ ಚುನಾವಣೆಯನ್ನು ರದ್ದುಗೊಳಿಸಿದ ಚುನಾವಣಾ ಆಯೋಗ

ವೆಲ್ಲೂರು ಲೋಕಸಭಾ ಚುನಾವಣೆಯನ್ನು ರದ್ದುಗೊಳಿಸಿದ ಚುನಾವಣಾ ಆಯೋಗ
ಚೆನ್ನೈ , ಬುಧವಾರ, 17 ಏಪ್ರಿಲ್ 2019 (09:42 IST)
ಚೆನ್ನೈ : ತಮಿಳುನಾಡಿನ ವೆಲ್ಲೂರು ಲೋಕಸಭಾ ಚುನಾವಣೆ ರದ್ದುಗೊಳಿಸಲು ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಚುನಾವಣಾ ಆಯೋಗಕ್ಕೆ  ಒಪ್ಪಿಗೆ ನೀಡಿದ್ದಾರೆ.

ತಮಿಳುನಾಡಿನಲ್ಲಿ ವೆಲ್ಲೂರು ಸೇರಿದಂತೆ 38 ಲೋಕಸಭಾ ಕ್ಷೇತ್ರ ಚುನಾವಣೆ ಏಪ್ರಿಲ್ 18ರಂದು ನಿಗದಿಯಾಗಿತ್ತು. ಆದರೆ ಡಿಎಂಕೆ ನಾಯಕ ದೊರೈ ಮುರುಗನ್ ಮನೆಯ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆಯು ಏಪ್ರಿಲ್ 10ರಂದು ದಾಳಿ ಮಾಡಿತ್ತು. ಈ ವೇಳೆ ಅವರ ಗೋದಾಮಿನಲ್ಲಿ ಬರೋಬ್ಬರಿ 11.53 ಕೋಟಿ ರೂ. ಹಣ ಪತ್ತೆಯಾಗಿತ್ತು. ಭಾರೀ ಪ್ರಮಾಣದಲ್ಲಿ ಹಣ ಪತ್ತೆಯಾಗಿದ್ದರಿಂದ ಹಣದಿಂದ ಮತದಾರರನ್ನು ಓಲೈಸುವ ಪ್ರಯತ್ನ ನಡೆಸಲಾಗಿದೆ ಎನ್ನುವ ಶಂಕಿಸಿ  ಚುನಾವಣಾ ಆಯೋಗವು ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆ ರದ್ದು ಮಾಡಲು ಅನುಮತಿ ಕೋರಿ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿತ್ತು.


 

ಈ ಹಿನ್ನಲೆಯಲ್ಲಿ ಇದೇ  ಮೊದಲ ಬಾರಿಗೆ ಹಣ ದುರ್ಬಳಕೆ ಆರೋಪದಿಂದ ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆ ರದ್ದುಗೊಳಿಸಲು ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಒಪ್ಪಿಗೆ ನೀಡಿದ್ದಾರೆ. ಆದ್ದರಿಂದ ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆ ರದ್ದುಗೊಳಿಸಲಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 


Share this Story:

Follow Webdunia kannada

ಮುಂದಿನ ಸುದ್ದಿ

ವ್ಯಕ್ತಿಯ ಅಂದ ಚೆಂದದ ಬಗ್ಗೆ ಮಾತನಾಡುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿಗೆ ಗಮನ ಕೊಡಿ- ಸಿಎಂಗೆ ರಾಜು ಕಾಗೆ ಟಾಂಗ್