Publish Date: Mon, 20 May 2019 (11:56 IST)
Updated Date: Mon, 20 May 2019 (11:57 IST)
ತುಮಕೂರು : ಎಕ್ಸಿಟ್ ಪೋಲ್ ಸಮೀಕ್ಷೆಯಲ್ಲಿ ಬಿಜೆಪಿ ಪರವಾಗಿ ಇರುವುದನ್ನು ನೋಡಿ ಕೆಲವು ರಾಜಕೀಯ ಪಕ್ಷಗಳು ಚಿಂತೆಯಲ್ಲಿ ಮುಳುಗಿದ್ದರೆ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಎಸ್. ಬಸವರಾಜು ದೇವೇಗೌಡರ ಕುರಿತು ವ್ಯಂಗ್ಯವಾಡಿದ್ದಾರೆ.
ಚುನಾವಣೋತ್ತರ ಸಮೀಕ್ಷೆಯಿಂದ ದೇವೇಗೌಡರಿಗೆ ನಿದ್ದೆ ಬರುವುದಿಲ್ಲ. ಈ ಸಮೀಕ್ಷೆ ಬಂದು ಮತ್ತೆ ಪ್ರಧಾನಿಯಾಗುವ ಕನಸು ಕಂಡಿದ್ದ ದೇವೇಗೌಡರ ಆಸೆಗೆ ತಣ್ಣೀರು ಬಿದ್ದ ಹಾಗಿದೆ ಎಂದು ಲೇವಡಿ ಮಾಡಿದ್ದಾರೆ.
ಮೋದಿ ಮತ್ತೆ ಪ್ರಧಾನಿ ಅನ್ನೋದನ್ನು ಸಮೀಕ್ಷೆ ಸಾಬೀತು ಮಾಡಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಲ್ಲಿ ನಾವು ನೂರಕ್ಕೆ ನೂರರಷ್ಟು ಗೆಲ್ಲುತ್ತೇವೆ. ಎಕ್ಸಿಟ್ ಪೋಲ್ ನಲ್ಲಿ ಮೋಸ ಇಲ್ಲ. ಇದು ಒಂದು ರೀತಿ ಶಾಸ್ತ್ರ ಹೇಳಿದ ಹಾಗೆ. ಶೇ. 100 ಕ್ಕೆ 80 ರಷ್ಟು ಸತ್ಯ ಇರುತ್ತದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.