Publish Date: Fri, 12 Apr 2019 (12:07 IST)
Updated Date: Fri, 12 Apr 2019 (12:09 IST)
ಹುಬ್ಬಳ್ಳಿ : ಸರ್ಕಾರದ ಆಯಸ್ಸು ಮುಗಿತಾ ಬಂದಿದೆ. ರಾಜ್ಯ ಸರ್ಕಾರ ಸದ್ಯ ಐಸಿಯುನಲ್ಲಿ ಇದ್ದು ಕೋಮಾ ಸ್ಥಿತಿಯನ್ನು ತಲುಪಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ಸುಭದ್ರ ಸರ್ಕಾರ ಬೇಕೋ, ಭ್ರಷ್ಟಾಚಾರದ ಸರ್ಕಾರ ಬೇಕೋ ಜನರೇ ತೀರ್ಮಾನ ಮಾಡಲಿ. ಪುಲ್ವಾಮಾ ದಾಳಿ ಬಗ್ಗೆ ನನಗೆ ಮೊದಲೇ ಗೊತ್ತಿತ್ತು ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಇದು ಕುಮಾರಸ್ವಾಮಿ ಅವರ ನೈತಿಕ ಅಧಃ ಪತನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಟುಂಬ ರಾಜಕಾರಣ ಅಂದ್ರೆ ಕುಟುಂಬದಲ್ಲಿ ಒಬ್ಬರು ಇಬ್ಬರೂ ರಾಜಕೀಯ ಮಾಡುವುದಲ್ಲ. ಸಂಪೂರ್ಣ ಕುಟುಂಬವೇ ರಾಜಕಾರಣ ಮಾಡುವುದು. ಅದಕ್ಕೆ ಉತ್ತಮ ಉದಾಹರಣೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ. ನಾನು ನಿಂಬೆ ಹಣ್ಣು ಇಟ್ಟುಕೊಂಡು ಭವಿಷ್ಯ ಹೇಳುತಿಲ್ಲ. ಪಕ್ಷದ ಬಲ ನೋಡಿ 22 ಸೀಟು ಗೆಲ್ಲುವುದಾಗಿ ಹೇಳುವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.