ಪ್ರಧಾನಿ ಮೋದಿ ಪಾರ್ಲಿಮೆಂಟ್ ಹೊರಗೆ ಹುಲಿಯಂತಿದ್ದರೆ, ಒಳಗೆ ಇಲಿಯಂತೆ ಇರುತ್ತಾರೆ-ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯ

Webdunia
ಬುಧವಾರ, 10 ಏಪ್ರಿಲ್ 2019 (08:56 IST)
ಕಲಬುರಗಿ : ಪ್ರಧಾನಿ ನರೇಂದ್ರ ಮೋದಿ ಅವರು ಪಾರ್ಲಿಮೆಂಟ್ ಹೊರಗೆ ಹುಲಿಯಂತಿದ್ದರೆ, ಒಳಗೆ ಇಲಿಯಂತೆ ಇರುತ್ತಾರೆ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದಾರೆ.

ಜಿಲ್ಲೆಯ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಜನರ ಮುಂದೆ ಒಂದು ಗಂಟೆ ಹೇಳಿದ್ದನ್ನೇ ಪುನಃ ಹೇಳುತ್ತಾರೆ. ಆದರೆ ಅವರು ಕಳೆದ ಐದು ವರ್ಷಗಳಲ್ಲಿ ಸಂಸತ್ತಿನಲ್ಲಿ ಮಾತನಾಡಿದ್ದು ಕೇವಲ 25 ಗಂಟೆ 25 ನಿಮಿಷ ಮಾತ್ರ. ಕಲಾಪದ ವೇಳೆ ವಿಪಕ್ಷ ನಾಯಕರ ಮುಂದೆ ನಿಂತು, ಇದು ಸರಿಯಾಗಿಲ್ಲ ಅಂತ ಧೈರ್ಯದಿಂದ ಒಂದು ದಿನವೂ ಹೇಳಲಿಲ್ಲ ಎಂದು ಆರೋಪಿಸಿದ್ದಾರೆ.

 

ಪ್ರಧಾನಿ ಮೋದಿ ಮತ್ತು ಅವರ ಬೆಂಬಲಿಗರು ನನ್ನನ್ನು ಸೋಲಿಸಲು ಪ್ರಯತ್ನಿಸುತ್ತಿದ್ದಾರೆ. ಇಬ್ಬರು ಕಾಲಿಲ್ಲದವರು ಪೈಲ್ವಾನ್ ಆಗಲು ಸಾಧ್ಯವಿಲ್ಲ. ಎಲ್ಲರಿಗೂ ಬೈಯುವುದು ಮಾತ್ರ ಪ್ರಧಾನಿ ಮೋದಿ ಅವರಿಗೆ ಗೊತ್ತಿದೆ. ಬಿಜೆಪಿಗಾಗಿ ದುಡಿದವರನ್ನು ಕಡೆಗಣಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು, ಬಿಜೆಪಿಯ ಹಿರಿಯ ಮುಖಂಡರಾದ ಎಚ್.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ, ಸುಮೀತ್ರಾ ಮಹಾಜನ್ ಸೇರಿದಂತೆ ಅನೇಕರಿಗೆ ಗೇಟ್ ಪಾಸ್ ನೀಡಿದ್ದಾರೆ. ನನ್ನನ್ನ ಬಿಟ್ಟರೆ ಯಾರೂ ಪ್ರಧಾನಿಯಾಗಲು ಯೋಗ್ಯರಿಲ್ಲ ಅಂತ ಮೋದಿ ಹೇಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments