Publish Date: Tue, 02 Apr 2019 (16:48 IST)
Updated Date: Tue, 02 Apr 2019 (16:51 IST)
ರಾಜ್ಯ ಕಾರ್ಯದರ್ಶಿಯಾಗಿ ಈ ಹಿಂದೆ ಕೆಲಸ ನಿರ್ವಹಿಸಿದ್ದ ಕೆ.ರತ್ನಪ್ರಭ ಬಿಜೆಪಿ ಸೇರ್ಪಡೆಗೊಳ್ಳುವುದು ಖಚಿತವಾಗಿದೆ.
ಕಲಬುರ್ಗಿಯಲ್ಲಿ ಉಮೇಶ್ ಜಾಧವರ ನಾಳೆ ನಾಮಿನೇಷನ್ ಸಲ್ಲಿಕೆ ಮಾಡಲಿದ್ದಾರೆ.
ಕಲಬುರ್ಗಿಯಲ್ಲಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಜಾಧವ್ ಹೇಳಿಕೆ ನೀಡಿದ್ದು, ಕಲಬುರ್ಗಿಯಲ್ಲಿ ಬೃಹತ್ ರ್ಯಾಲಿ ಮುಖಾಂತರ ಡಿಸಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ರು. ಜಾಧವ್ ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಸಾಥ್ ನೀಡಲಿದ್ದಾರೆ. ನಾಳೆ ನಾಮಪತ್ರ ಸಲ್ಲಿಕೆ ವೇಳೆ ಯಡಿಯುರಪ್ಪ ಭಾಗಿಯಾಗಲಿದ್ದಾರೆ.
ಇನ್ನು ಇದೇ ಸಂದರ್ಭದಲ್ಲಿ ಕೆ. ರತ್ನಪ್ರಭ ಬಿಜೆಪಿ ಸೇರ್ಪಡೆ ಆಗಲಿದ್ದಾರೆ ಎಂದು ಮಾಹಿತಿ ನೀಡಿದ್ರು. ಯಡಿಯೂರಪ್ಪ ಸಮ್ಮುಖದಲ್ಲಿ ಕೆ. ರತ್ನ ಪ್ರಭ ನಾಳೆ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. ಕೆ. ರತ್ನ ಪ್ರಭ ರಾಜ್ಯ ಕಾರ್ಯದರ್ಶಿ ಆಗಿದ್ದರು.