Publish Date: Mon, 08 Apr 2019 (18:09 IST)
Updated Date: Mon, 08 Apr 2019 (18:11 IST)
ಬಿಸಿಲನ್ನೂ ಲೆಕ್ಕಿಸದೇ ಕೆಪಿಸಿಸಿ ಅಧ್ಯಕ್ಷರು ರೋಡ್ ಷೋ ನಡೆಸಿ ಮತಯಾಚನೆ ನಡೆಸಿದ್ದಾರೆ.
ಬೆಂಗಳೂರು ದಕ್ಷಿಣ ಲೋಕಸಭಾ ಅಭ್ಯರ್ಥಿ ಬಿ.ಕೆ ಹರಿಪ್ರಸಾದ್ ಪರ ಪದ್ಮನಾಭ ನಗರದ ಬನಶಂಕರಿಯಿಂದ ರೋಡ್ ಷೋ ನಡೆಸಿದ ಕೆಪಿಸಿಸಿ ಅಧ್ಯಕ್ಷ ಶ್ರೀ ದಿನೇಶ್ ಗುಂಡೂರಾವ್ ರವರು ಕಾಂಗ್ರೆಸ್ ಪರ ಮತಯಾಚನೆ ಮಾಡಿದ್ರು.
ಬನಶಂಕರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಆರಂಭಿಸಿದ ಬೆಂಗಳೂರು ದಕ್ಷಿಣ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ಕೆ ಹರಿಪ್ರಸಾದ್ ಗೆ ಕಾರ್ಯಕರ್ತರು ಸಾಥ್ ನೀಡಿದ್ರು.
ಪದ್ಮನಾಭ ನಗರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಮೋನೊಟೈಪ್ ರೋಡ್ ಶೋ ಮಾಡುವ ಮೂಲಕ ಮತಯಾಚನೆ ಮಾಡಿದರು.
ಬಿ.ಕೆ ಹರಿಪ್ರಸಾದ್ ಗೆ ಮಾಜಿ ಸಚಿವೆ ಮೋಟಮ್ಮ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರಪ್ಪ ನಾಯ್ಡು ಹಾಗೂ ಪದ್ಮನಾಭ ನಗರ ವಿಧಾನಸಭಾ ಪರಾಜಿತ ಜೆಡಿಎಸ್ ಅಭ್ಯರ್ಥಿ ಗೋಪಾಲ್ ಸಾಥ್ ನೀಡಿದ್ರು.