Publish Date: Thu, 23 May 2019 (12:09 IST)
Updated Date: Thu, 23 May 2019 (12:15 IST)
ನವದೆಹಲಿ : ಇಂದು ನಡೆಯುತ್ತಿರುವ ಲೋಕಸಭಾ ಚುನಾಣೆಯ ಮತ ಎಣಿಕೆ ಕಾರ್ಯ ಕೆಲ ಕ್ಷೇತ್ರಗಳಲ್ಲಿ ಈಗಾಗಲೇ ಪೂರ್ಣಗೊಂಡಿದೆ.
ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಪ್ರಧಾನಿ ನರೇಂದ್ರ ಮೋದಿ ಜಯಭೇರಿ ಬಾರಿಸಿದ್ದು, ಆಯೋಗದಿಂದ ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ. ಮತ್ತೊಮ್ಮೆ ಗೆಲುವು ಸಾಧಿಸಿರುವ ಹಿನ್ನಲೆ ಮೋದಿ ಸಚಿವ ಸಂಪುಟ ಸಭೆ ಕರೆದಿದ್ದಾರೆ.
ಹಾಗೇ ಗಾಂಧಿನಗರ ಕ್ಷೇತ್ರದಲ್ಲಿ ಅಮಿತ್ ಶಾ ಗೆಲುವುಸಾಧಿಸಿದ್ದು, ಆ ಮೂಲಕ ಅವರು ಮೊದಲ ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.