Select Your Language

Notifications

webdunia
webdunia
webdunia
Friday, 11 April 2025
webdunia

ಮೋದಿ ಮತ್ತೆ ಪ್ರಧಾನಿಯಾಗಬೇಕು- ಸಿದ್ಧರಾಮಯ್ಯ ರಿಂದ ಎಡವಟ್ಟು ಹೇಳಿಕೆ

ಬೀದರ್
ಬೀದರ್ , ಬುಧವಾರ, 3 ಏಪ್ರಿಲ್ 2019 (06:57 IST)
ಬೀದರ್ : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಹೊಗಳುವ ಬರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎಡವಟ್ಟು ಹೇಳಿಕೆಯೊಂದನ್ನು ನೀಡಿದ್ದಾರೆ.


ಬೀದರ್ ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಬೇಕು. ನರೇಂದ್ರ ಮೋದಿ ಪ್ರಧಾನಿಯಾಗಬೇಕು. ಈ ನಿಟ್ಟಿನಲ್ಲಿ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದ್ದಾರೆ.


ನರೇಂದ್ರ ಮೋದಿ ಹೆಸರನ್ನು ಅರ್ಧಕ್ಕೆ ಹೇಳುತ್ತಲೇ ಎಚ್ಚೆತ್ತುಕೊಂಡ ಸಿದ್ದರಾಮಯ್ಯ, ಬಳಿಕ ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂದು ತಮ್ಮ ಹೇಳಿಕೆಯನ್ನು ಪೂರ್ಣಗೊಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಯುವಕರೇ ಎಚ್ಚರ!ಒಂಟಿ ಹೆಣ್ಣುಮಕ್ಕಳನ್ನು ಕೆಣುಕುವವರ ಮೇಲೆ ಸ್ಥಳದಲ್ಲೇ ದಾಖಲಾಗುತ್ತೆ ಕೇಸು