Publish Date: Sun, 21 Apr 2019 (14:07 IST)
Updated Date: Sun, 21 Apr 2019 (14:09 IST)
ನವದೆಹಲಿ: ಬಿಜೆಪಿ ಚುನಾವಣಾ ರ್ಯಾಲಿಯಲ್ಲಿ ಮತ್ತೆ ವಾಯುಸೇನೆ ವಿಂಗ್ ಕಮಾಂಡರ್ ಅಭಿನಂದನ್ ಜೈನ್ ಹೆಸರು ಪ್ರಸ್ತಾಪವಾಗಿದೆ. ಗುಜರಾತ್ ನ ಪಠಾಣ್ ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪಾಕ್ ವಶದಲ್ಲಿದ್ದ ಅಭಿನಂದನ್ ಬಗ್ಗೆ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ.
ಪಾಕ್ ವಶದಲ್ಲಿದ್ದ ವಿಂಗ್ ಕಮಾಂಡರ್ ಅಭಿನಂದನ್ ಜೈನ್ ಗೆ ಏನಾದರೂ ಅಪಾಯ ಮಾಡಿದರೆ ಜೋಕೆ ಎಂದು ಪಾಕಿಸ್ತಾನಕ್ಕೆ ಮೊದಲೇ ಎಚ್ಚರಿಕೆ ನೀಡಿದ್ದೆವು ಎಂದು ಪ್ರಧಾನಿ ಮೋದಿ ಹೇಳಿಕೊಂಡಿದ್ದಾರೆ.
ಅಭಿನಂದನ್ ಜೈನ್ ರನ್ನು ತನ್ನ ವಶಕ್ಕೆ ಪಡೆದಿದ್ದ ಪಾಕ್ ಸೇನೆ ರಾಜತಾಂತ್ರಿಕ ಒತ್ತಡಕ್ಕೆ ಮಣಿದು ಎರಡೇ ದಿನಗಳಲ್ಲಿ ಬಿಡುಗಡೆಗೊಳಿಸಿತ್ತು. ಈ ಸಂದರ್ಭದಲ್ಲಿ ಅಭಿನಂದನ್ ಗೆ ಏನಾದರೂ ಆದರೆ ನಿಮ್ಮನ್ನು ಸುಮ್ಮನೇ ಬಿಡೆವು ಎಂದು ಪಾಕ್ ಗೆ ಎಚ್ಚರಿಸಿದ್ದಾಗಿ ಪ್ರಧಾನಿ ಮೋದಿ ಹೇಳಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ