ಭೋಪಾಲ್ : ಪ್ರಧಾನಿ ಮೋದಿ ಈ ಹಿಂದೆ ಗುಜರಾತ್ ಹತ್ಯಾಕಾಂಡದ ಬಳಿಕ ಸಿಎಂ ಆಗಿದ್ದ ವೇಳೆ ಅವರನ್ನು ಪಕ್ಷದಿಂದಲೇ ವಜಾಗೊಳಿಸಲು ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸಿದ್ಧತೆ ನಡೆಸಿದ್ದರು ಎಂದು ಬಿಜೆಪಿ ಮಾಜಿ ನಾಯಕ ಯಶವಂತ್ ಸಿನ್ಹಾ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಶವಂತ್ ಸಿನ್ಹಾ, 2002 ರಲ್ಲಿ ಗೋವಾದಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದ ಅಟಲ್ ಜೀ,ಮೋದಿ ರಾಜೀನಾಮೆ ನೀಡದಿದ್ದರೆ ಅವರ ಸರ್ಕಾರವನ್ನೇ ವಜಾಗೊಳಿಸುವ ನಿರ್ಧಾರ ಕೈಗೊಳ್ಳಬೇಕಾಗಬಹುದು ಎಂದು ಹೇಳಿದ್ದರು ಎಂಬುದಾಗಿ ತಿಳಿಸಿದ್ದಾರೆ.
ಆದರೆ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದ ಆಗ ಗೃಹಸಚಿವರಾಗಿದ್ದ ಎಲ್.ಕೆ.ಅಡ್ವಾಣಿ ಅವರು ಮೋದಿ ಅವರನ್ನು ವಜಾಗೊಳಿಸಿದರೆ, ನಾನು ರಾಜೀನಾಮೆ ನೀಡುತ್ತೇನೆಂದು ಹೇಳಿದ ಕಾರಣ ವಾಜಪೇಯಿ ತಮ್ಮ ನಿರ್ಧಾರವನ್ನು ಕೈ ಬಿಟ್ಟಿದ್ದರು ಎಂದು ಸಿನ್ಹಾ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.