Select Your Language

Notifications

webdunia
webdunia
webdunia
webdunia

ಮಂಡ್ಯ ಹಾಗೂ ಹಾಸನದಲ್ಲಿ ಜೆಡಿಎಸ್ ವಿರುದ್ಧ ಸಿದ್ದರಾಮಯ್ಯ ಒಳಸಂಚು ನಡೆಸಿದ್ದಾರೆ- ಪ್ರತಾಪ್ ಸಿಂಹ ಹೊಸ ಬಾಂಬ್

ಮಂಡ್ಯ ಹಾಗೂ ಹಾಸನದಲ್ಲಿ ಜೆಡಿಎಸ್ ವಿರುದ್ಧ ಸಿದ್ದರಾಮಯ್ಯ ಒಳಸಂಚು ನಡೆಸಿದ್ದಾರೆ- ಪ್ರತಾಪ್ ಸಿಂಹ ಹೊಸ ಬಾಂಬ್
ಮೈಸೂರು , ಭಾನುವಾರ, 14 ಏಪ್ರಿಲ್ 2019 (09:55 IST)
ಮೈಸೂರು : ಸಿದ್ದರಾಮಯ್ಯ ಅವರು ಮಂಡ್ಯ ಹಾಗೂ ಹಾಸನದಲ್ಲಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳ ವಿರುದ್ಧ ಅಭ್ಯರ್ಥಿಗಳನ್ನು ನಿಲ್ಲಲ್ಲು ಪ್ರೇರೆಪಿಸಿ  ಒಳಸಂಚು ನಡೆಸಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೊಸ ಬಾಂಬ್ ಸಿಡಿಸಿದ್ದಾರೆ.


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ತುಮಕೂರಿನಲ್ಲಿ ಮುದ್ದಹನುಮೇಗೌಡರನ್ನು ಎತ್ತಿಕಟ್ಟಿರುವುದು, ಹಾಸನದಲ್ಲಿ ವಿರೋಧ ಮಾಡುತ್ತಿರುವುದು, ಹಾಗೂ ಮಂಡ್ಯದಲ್ಲಿ ಸುಮಲತಾ ಅವರನ್ನು ಅಭ್ಯರ್ಥಿ ಮಾಡಿರುವುದು ಸಿದ್ದರಾಮಯ್ಯ ಅವರ ಒಳಸಂಚು, ಇದು ಜೆಡಿಎಸ್ ನವರಿಗೂ ಗೊತ್ತಾಗಿದೆ ಎಂದು  ಆರೋಪಿಸಿದ್ದಾರೆ.


ತಮ್ಮ ಬಾಯಿ ಬೊಂಬಾಯಿ, ಅಭಿವೃದ್ಧಿ ಶೂನ್ಯ ಎಂಬ ಸಿದ್ದರಾಮಯ್ಯರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಾಯಿ ಬೊಂಬಾಯಿ, ಅಭಿವೃದ್ಧಿ ಶೂನ್ಯ ಎಂಬುದು ಜನರಿಗೆ ಗೊತ್ತಾಗಿದೆ. ಆದ್ದರಿಂದಲೇ ಜನ ಸಿದ್ದರಾಮಯ್ಯರನ್ನು ಚಾಮುಂಡೇಶ್ವರಿಯಿಂದ ಬದಾಮಿಗೆ ಕಳುಹಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ-ನಿತೀಶ್ ಕುಮಾರ್ ರದ್ದು ಲೈಲಾ ಮಜ್ನು ಜೋಡಿಯಂತೆ!