ಸಿದ್ದರಾಮಯ್ಯರನ್ನು ಜೆಡಿಎಸ್ ನಾಯಕರು ಟಾರ್ಗೆಟ್ ಮಾಡುತ್ತಿದ್ದಾರೆ- ಕೈ ನಾಯಕರ ಆಕ್ರೋಶ

ಸೋಮವಾರ, 13 ಮೇ 2019 (11:30 IST)
ಬೆಂಗಳೂರು : ಜೆಡಿಎಸ್ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಮುಂದೆ ಅಸಮಾಧಾನ ಹೊರ ಹಾಕಿದ್ದಾರೆ ಎಂದು ಹೇಳಲಾಗಿದೆ.
ಸಿದ್ಧರಾಮಯ್ಯ ಮತ್ತೆ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಹೇಳಿಕೆ ನೀಡಿದ್ದ ವಿಚಾರ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಪರಸ್ಪರ ವಾಗ್ದಾಳಿಗೆ  ಕಾರಣವಾಗಿದ್ದು, ಸಿದ್ದರಾಮಯ್ಯ ವಿರುದ್ಧ ಕಾಲು ಕೆರೆದು ಜಗಳಕ್ಕೆ ಬರುವಂತೆ ಜೆಡಿಎಸ್ ಪಕ್ಷದ ಮುಖಂಡರು ಹೇಳಿಕೆ ನೀಡುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಮುಂದೆ ಅಸಮಾಧಾನ ಹೊರ ಹಾಕಿದ್ದಾರೆ.


ಲೋಕಸಭೆ ಚುನಾವಣೆ ಮುಗಿದ ಬಳಿಕ ಜೆಡಿಎಸ್ ಮುಖಂಡರ ವರ್ತನೆ ಸರಿಯಿಲ್ಲ. ಜೆಡಿಎಸ್ ನಾಯಕರನ್ನು ದೇವೇಗೌಡರು ಹದ್ದುಬಸ್ತಿನಲ್ಲಿ ಇಡುತ್ತಿಲ್ಲ. ಸಮನ್ವಯ ಸಮಿತಿ ಸಭೆಯಲ್ಲಿ ಇದರ ಬಗ್ಗೆ ಗಂಭೀರ ಚರ್ಚೆ ಆಗಲೇಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ಕೈ ಪಡೆ ತಿರುಗೇಟು