Select Your Language

Notifications

webdunia
webdunia
webdunia
webdunia

ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಮತದಾನ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಮತದಾನ
ಬೆಂಗಳೂರು , ಗುರುವಾರ, 18 ಏಪ್ರಿಲ್ 2019 (07:47 IST)
ಬೆಂಗಳೂರು : ಲೋಕಸಭಾ ಚುನಾವಣೆಗೆ ಇಂದು ಕರ್ನಾಟಕ ಸಜ್ಜಾಗಿದ್ದು, ಇಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ.


ಉಡುಪಿ -ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.


 ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. 14 ಕ್ಷೇತ್ರಗಳ ಪೈಕಿ 13ರಲ್ಲಿ ಬಿಜೆಪಿ, 10ರಲ್ಲಿ ಕಾಂಗ್ರೆಸ್, 4ರಲ್ಲಿ ಜೆಡಿಎಸ್ ಸ್ಪರ್ಧಿಸಲಿದ್ದು,  ರಾಜ್ಯದ 14 ಕ್ಷೇತ್ರಗಳ ಒಟ್ಟು 241 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ದೇಶದ 11 ರಾಜ್ಯಗಳ 95 ಕ್ಷೇತ್ರಗಳಲ್ಲಿ ಮತದಾನ