Select Your Language

Notifications

webdunia
webdunia
webdunia
webdunia

ವಿಜಯ್ ಮಲ್ಯ, ನೀರವ್ ಮೋದಿಯಂತೆ ಭಾರತದ ಬ್ಯಾಂಕ್ ಗಳಿಗೆ ವಂಚಿಸಿ ಪರಾರಿಯಾದವರು ಇನ್ನೆಷ್ಟು ಮಂದಿ ಇದ್ದಾರೆ ಗೊತ್ತಾ?

ವಿಜಯ್ ಮಲ್ಯ, ನೀರವ್ ಮೋದಿಯಂತೆ ಭಾರತದ ಬ್ಯಾಂಕ್ ಗಳಿಗೆ ವಂಚಿಸಿ ಪರಾರಿಯಾದವರು ಇನ್ನೆಷ್ಟು ಮಂದಿ ಇದ್ದಾರೆ ಗೊತ್ತಾ?
ನವದೆಹಲಿ , ಬುಧವಾರ, 17 ಏಪ್ರಿಲ್ 2019 (09:57 IST)
ನವದೆಹಲಿ : ಭಾರತದ ಬ್ಯಾಂಕ್ ಗಳಿಗೆ ಸಾಲ ಮರುಪಾವತಿ ಮಾಡದೇ ವಂಚಿಸಿ ವಿದೇಶಕ್ಕೆ ಪರಾರಿಯಾದವರು ಬರೀ ವಿಜಯ್ ಮಲ್ಯ, ನೀರವ್ ಮೋದಿ ಮಾತ್ರ ಎಂದು ಹಲವರು ಅಂದುಕೊಂಡಿದ್ದಾರೆ.


ಆದರೆ ವಿಜಯ್ ಮಲ್ಯ, ನೀರವ್ ಮೋದಿಯಂತವರು ಇನ್ನೂ ಹಲವು ಮಂದಿ ಇದ್ದಾರೆ ಎಂಬ ವಿಚಾರ ಇದೀಗ ತಿಳಿದುಬಂದಿದ್ದು, ಜಾರಿ ನಿರ್ದೇಶನಾಲಯವೇ ತನಿಖಾ ದಳದ ವಿಶೇಷ ನ್ಯಾಯಾಧೀಶರಾದ ಅರವಿಂದ್ ಕುಮಾರ್ ಅವರಿಗೆ ಇಂಥದ್ದೊಂದು ವಿಷಯವನ್ನು ಬಹಿರಂಗಪಡಿಸಿದ್ದಾರೆ.


ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೋಸ್ಕಿ ಮಾತ್ರವಲ್ಲದೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಇನ್ನೂ 36 ಉದ್ಯಮಿಗಳು ಆರ್ಥಿಕ ವಂಚನೆ ಹಾಗೂ ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದು, ಅವರು ಭಾರತದಿಂದ ಪರಾರಿಯಾಗಿದ್ದಾರೆ ಎಂಬ ಮಾಹಿತಿಯನ್ನು ಜಾರಿ ನಿರ್ದೇಶನಾಲಯ ಬಹಿರಂಗಪಡಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಅಂಡಾಣು ದಾನ ಲೈಂಗಿಕ ಜೀವನದ ಮೇಲೆ ಪರಿಣಾಮ ಬೀರುತ್ತದೆಯೇ?