ರಾಜ್ಯದ ಈ ಎರಡು ಕ್ಷೇತ್ರಗಳಲ್ಲಿ ಮತದಾನ ಗೌಪ್ಯತೆ ಉಲ್ಲಂಘನೆ

ಮಂಗಳವಾರ, 23 ಏಪ್ರಿಲ್ 2019 (11:02 IST)
ಬೆಂಗಳೂರು : ರಾಜ್ಯದ 14 ಲೋಕಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಈ ನಡುವೆ ಮತದಾನ ಗೌಪ್ಯತೆ ಉಲ್ಲಂಘನೆ ಮಾಡಿರುವ ಆರೋಪ ಕೇಳಿಬಂದಿದೆ.


ಮತದಾನ ವೇಳೆ ಮೊಬೈಲ್ ಬಳಕೆಗೆ ನಿಷೇಧ ಹೇರಿದ್ದರೂ ಕೂಡ ಇದೀಗ ಕೊಪ್ಪಳದ ಜಿಲ್ಲೆ ಕಾರಟಗಿ ತಾಲೂಕಿನ ಬೂದುಗಂಪಾ ಗ್ರಾಮದ ಮಲ್ಲಯ್ಯ ಎನ್ನುವ ವ್ಯಕ್ತಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ ಫೋಟೋ ತೆಗೆದುಕೊಂಡು ವಾಟ್ಸಪ್ ನಲ್ಲಿ ಹರಿಬಿಟ್ಟಿದ್ದಾರೆ.
ಅಷ್ಟೇ ಅಲ್ಲದೇ ಗದಗ ಜಿಲ್ಲೆಯ ರೋಣ ತಾಲೂಕಿನ ಬೆಣಸಮಟ್ಟಿ ಗ್ರಾಮದ ಮಹಾಂತೇಶ್ ಎಂಬುವರು ಹಾವೇರಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಉದಾಸಿಗೆ ಮತ ಹಾಕಿದ ಪೋಟೋ ತೆಗೆದು ಫೇಸ್ ಬುಕ್ ಗೆ ಅಪ್ಲೋಡ್ ಮಾಡಿದ್ದಾರೆ.


ಈ ಎರಡು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮತದಾನದ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳುವಂತೆ  ಸಾರ್ವಜನಿಕರು ಆಗ್ರಹಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ

ಮುಂದಿನ ಸುದ್ದಿ ಪ್ರಧಾನಿ ಮೋದಿ ತಾಯಿ ಹೀರಾಬೆನ್ ಮೋದಿಯಿಂದ ಮತದಾನ