Select Your Language

Notifications

webdunia
webdunia
webdunia
Saturday, 12 April 2025
webdunia

ಮಂಡ್ಯ ಡಿಸಿಗೆ ಬಿಜೆಪಿ ಮಾಡಿದ್ದೇನು?

ಮಂಡ್ಯ
ಬೆಂಗಳೂರು , ಬುಧವಾರ, 3 ಏಪ್ರಿಲ್ 2019 (19:44 IST)
ಮಂಡ್ಯ ಜಿಲ್ಲಾ ಚುನಾವಣಾಧಿಕಾರಿ ವಿರುದ್ಧ ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ದೂರು ಸಲ್ಲಿಸಿದೆ.

ದೂರು ಸಲ್ಲಿಸಿದ ಬಿಜೆಪಿ ವಕ್ತಾರ ಗೋ.ಮಧುಸೂಧನ್, ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ಅವರ ನಾಮಪತ್ರವನ್ನು ಎರಡೆರಡು ಬಾರಿ ತಿದ್ದುಪಡಿ ಮಾಡಿಕೊಂಡು ಬರಲು ಕಾನೂನು ಬಾಹಿರವಾಗಿ ಅವಕಾಶ ಮಾಡಿಕೊಟ್ಟಿದ್ದಾರೆ. ಸುಮಲತಾ ಅವರ ಏಜೆಂಟ್ ಮದನ್ ಗೆ ಲಿಖಿತ ದೂರು ಸಲ್ಲಿಸುವಂತೆ ಹೇಳಿ, ಅವರು ದೂರು ಬರೆದು ಸಲ್ಲಿಸುವಷ್ಟರಲ್ಲಿ ನಿಖಿಲ್ ನಾಮಪತ್ರ ಅಂಗೀಕರಿಸಿದ್ದಾರೆ. ನಾಮಪತ್ರ ಪರಿಶೀಲನೆಯ ಸಂದರ್ಭದ ವಿಡಿಯೋ ಕೊಡುವ ವಿಷಯದಲ್ಲೂ ನಿರ್ಲಕ್ಷ್ಯ ತೋರಿಸಿದ್ದಾರೆ‌.

ಮಂಡ್ಯದಲ್ಲಿ ಇವರಿಂದ ಪಾರದರ್ಶಕವಾದ ನ್ಯಾಯಸಮ್ಮತ ಚುನಾವಣೆ ನಿರೀಕ್ಷೆ ಇಲ್ಲ. ಹಾಗಾಗಿ ಮಂಡ್ಯ ಜಿಲ್ಲಾ ಚುನಾವಣಾಧಿಕಾರಿ ಮಂಜುಶ್ರೀ ಹಾಗೂ ವೀಕ್ಷಕ ರಂಜೀತ್ ಕುಮಾರ್ ಅವರನ್ನು ಬದಲಾವಣೆ ಮಾಡಲು ಒತ್ತಾಯಿಸಿದ್ದೇವೆ.

ಈಗಾಗಲೇ ಈ ಸಂಬಂಧ ಕೇಂದ್ರ ಚುನಾವಣಾ ಆಯೋಗಕ್ಕೆ ತನಿಖಾ ವರದಿ ಸಲ್ಲಿಸಿದ್ದು, ಅವರೂ ಸಹ ಶೀಘ್ರದಲ್ಲೇ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಸಂಜೀವ್ ಕುಮಾರ್ ಕೂಡ ಭರವಸೆ ನೀಡಿದ್ದಾರೆ ಎಂದಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಕುಮಾರಸ್ವಾಮಿಗೆ ಟೈಂ ಬಾಂಬ್ ಫಿಕ್ಸ್: ಶಾಕಿಂಗ್ ನ್ಯೂಸ್