Publish Date: Thu, 23 May 2019 (08:56 IST)
Updated Date: Thu, 23 May 2019 (08:57 IST)
ನವದೆಹಲಿ : ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು 8 ಗಂಟೆಯಿಂದ ಆರಂಭವಾಗಿದ್ದು, ಇದೀಗ ಮೊದಲಿಗೆ ಅಂಚೆ ಮತಪತ್ರಗಳ ಎಣಿಕೆ ಕಾರ್ಯ ನಡೆದಿದೆ.
ಇದರಲ್ಲಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮುನ್ನಡೆ ಸಾಧಿಸಿದ್ದಾರೆ. ರಾಯಬರೇಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಮುನ್ನಡೆ ಸಾಧಿಸಿದ್ದಾರೆ.
ವಾರಣಾಸಿಯಲ್ಲಿ ಪ್ರದಾನಿ ನರೇಂದ್ರ ಮೋದಿ ಅವರು ಮುನ್ನಡೆ ಸಾಧಿಸಿದ್ದು, ಗುಜರಾತ್ ನ ಗಾಂಧಿ ನಗರದಲ್ಲಿ 25 ಸಾವಿರ ಮತಗಳ ಅಂತರದಲ್ಲಿ ಅಮಿತ್ ಶಾ ಮುನ್ನಡೆ ಸಾಧಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.