ಪ್ರಧಾನಿ ಮೋದಿಯನ್ನು ತೆಗಳುವ ಭರದಲ್ಲಿ ಪಾಕ್ ಪ್ರಧಾನಿಯನ್ನು ಹೊಗಳಿದ ಕೈ ಶಾಸಕ

Webdunia
ಶುಕ್ರವಾರ, 12 ಏಪ್ರಿಲ್ 2019 (10:59 IST)
ಉಡುಪಿ : ಕಾಂಗ್ರೆಸ್ ಶಾಸಕರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರನ್ನು ತೆಗಳುವ ಭರದಲ್ಲಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಒಬ್ಬ ಸಜ್ಜನ ವ್ಯಕ್ತಿ ಎಂದು ಹೊಗಳಿದ್ದಾರೆ.


ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಪರ ಎನ್.ಆರ್ ಪುರದ ಮೆಣಸೂರಿನಲ್ಲಿ ನಡೆದ ಸಮಾವೇಶದಲ್ಲಿ ಶೃಂಗೇರಿಯ ಕಾಂಗ್ರೆಸ್ ಶಾಸಕ ರಾಜೇಗೌಡರು ಪಾಲ್ಗೊಂಡಿದ್ದರು. ಆ ವೇಳೆ ಮಾತನಾಡಿದ ಅವರು, ದೇಶದಲ್ಲಿ ಪ್ರಧಾನಿ ಮೋದಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಸರ್ಜಿಕಲ್ ಸ್ಟ್ರೈಕ್ ಹೆಸರಿನಲ್ಲಿ ದೇಶದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ನಮ್ಮ ಯುದ್ಧ ವಿಮಾನ ಪಾಕಿಸ್ತಾನದ ಗಡಿಗೆ ಹೋಗಿತ್ತು. ಅವರ ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದು ನಿಜ. ಬಳಿಕ ವಿಂಗ್ ಕಮಾಂಡರ್ ಅಭಿನಂದನ್ ರನ್ನು ವಶದಲ್ಲಿಟ್ಟುಕೊಂಡಿದ್ದು ನಿಜ ಎಂದು ಹೇಳಿದ್ದಾರೆ.


ಆದರೆ ಅಭಿನಂದನ್ ಬಂಧನದ ಬಳಿಕ ಮೋದಿ ಪಾಕಿಸ್ತಾನಕ್ಕೆ ಬೆದರಿಕೆ ಹಾಕಿದ್ರು, ಆದರೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಒಬ್ಬ ಸಜ್ಜನ ವ್ಯಕ್ತಿ. ಅವರು ನಮ್ಮ ದೇಶವನ್ನು ನೋಡಿದ್ದಾರೆ. ನಮ್ಮ ಸೈನಿಕರನ್ನು ನೋಡಿ ಇಮ್ರಾನ್ ಖಾನ್ ವಿಂಗ್ ಕಮಾಂಡರ್ ಅಭಿನಂದನ್ ರನ್ನು ಬಿಡುಗಡೆಗೊಳಿಸಿದ್ದೇ ಹೊರತು ಮೋದಿ ಬೆದರಿಕೆಯಿಂದಲ್ಲ ಎಂದು ಪಾಕ್ ಪ್ರಧಾನಿಯ ಗುಣಗಾನ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

ರಾಜ್ಯದ ಸಿಎಂ ಕುರ್ಚಿ ಫೈಟ್ ಪರಿಹಾರಕ್ಕೆ ಈ ಒಂದು ಮೀಟಿಂಗ್ ಮೇಲೇ ಎಲ್ಲರ ಕಣ್ಣು

ಮುಂದಿನ ಸುದ್ದಿ
Show comments