Select Your Language

Notifications

webdunia
webdunia
webdunia
webdunia

ಶಕ್ತಿಗಿಂತ ಯುಕ್ತಿ ಮೇಲೆಂದು ತೋರಿದ ಗಣಪ..

ಶಕ್ತಿಗಿಂತ ಯುಕ್ತಿ ಮೇಲೆಂದು ತೋರಿದ ಗಣಪ..
ಒಂದು ದಿನ ಕೈಲಾಸ ವಾಸನಾದ ಶಿವ ಮತ್ತು ಮಡದಿ ಪಾರ್ವತಿ ತಮ್ಮಿಬ್ಬರು ಪುತ್ರರಾದ ಗಣೇಶ ಮತ್ತು ಸುಬ್ರಹ್ಮಮಣ್ಯರೊಂದಿಗೆ ಸಂತಸದಿಂದ ಕಾಲಕಳೆಯುತ್ತಿದ್ದರು.

ಶಿವ-ಪಾರ್ವತಿಯರು ತಮ್ಮಿಬ್ಬರು ಪುತ್ರರಿಗೆ ಎರಡು ಸುಂದರ ಹಣ್ಣನ್ನು ನೀಡಿದ್ದರು. ಇಬ್ಬರಿಗೂ ಅವೆರಡೂ ತಮಗೇ ಸೇರಬೇಕೆಂಬ ಆಸೆಯಿತ್ತು.

WD
ಆ ಹಣ್ಣಿನಲ್ಲಿ ವಿಶೇಷವಾದ ಜ್ಞಾನ ಮತ್ತು ಎಂದಿಗೂ ಅಳಿಯದ ವಿಶೇಷತೆಯೊಂದು ಅಡಕವಾಗಿರುವುದೆಂದು ಜನುಮದಾತರು ತಿಳಿಸಿದ್ದರು. ಆ ಹಣ್ಣನ್ನು ಪಡೆಯಲು ಇಬ್ಬರೂ ಸ್ಫರ್ಧಿಸಬೇಕಾಗಿತ್ತು ಮತ್ತು ಯಾರು ಅದರಲ್ಲಿ ಗೆಲ್ಲುತ್ತಾರೋ ಅವರು ಮೂರು ಬಾರಿ ಪ್ರಪಂಚ ಪ್ರದಕ್ಷಿಣೆ ಮಾಡಿ ಮೊದಲಿಗರಾಗಿ ಬರಬೇಕಾಗಿತ್ತು.

ಕೊನೆಗೂ ಸ್ಫರ್ಧೆಯಲ್ಲಿ ಕಾರ್ತಿಕೇಯನೇ ಮೊದಲಿಗನಾಗಿ ಲೋಕ ಸುತ್ತಲು ತನ್ನ ವಾಹನವಾದ ನವಿಲನ್ನೇರಿ ಹೊರಟ. ಆಕಾಶದಲ್ಲಿ ಹಾರಾಡುತ್ತಾ ಪವಿತ್ರವೂ ಪಾವನಪೂಜ್ಯವೂ ಆದ ಸ್ಥಳಗಳಲ್ಲಿ ನಿಂದು ದೇವದೇವೋತ್ತಮರನ್ನೆಲ್ಲಾ ಪೂಜಿಸುತ್ತಾ ಮುಂದೆ ಸಾಗುತ್ತಿದ್ದ.

ಆದರೆ ಗಣೇಶನಿಗೆ ತನ್ನ ದೇಹದ್ದೇ ಚಿಂತೆಯಾಗಿತ್ತು. ತನ್ನ ಡೊಳ್ಳು ಹೊಟ್ಟೆಯನ್ನೆತ್ತಿಕೊಂಡು ನಿಧಾನವಾಗಿ ಸಾಗಿದರೆ ಯಾವುದೇ ರೀತಿಯಲ್ಲೂ ತಾನು ಕಾರ್ತಿಕೇಯನನ್ನು ಹಿಂದಿಕ್ಕಲಾರೆನೆಂಬುದು ಅವನಿಗೆ ಚೆನ್ನಾಗಿ ತಿಳಿದಿತ್ತು.

ಆದರೆ ಅವನ ಬುದ್ಧಿಯು ಅವನ ಸಮಸ್ಯೆಗೆ ತಕ್ಕ ಪರಿಹಾರ ಸೂಚಿಸಿತ್ತು. ಅವನು ಮರುಯೋಚಿಸದೇ ತನ್ನ ಜನುಮದಾತರಾದ ಸಾಕ್ಷಾತ್ ಪಾರ್ವತೀ ಪರಮೇಶ್ವರರಿಗೆ ಪ್ರದಕ್ಷಿಣೆ ಹಾಕಿ ನಿಂತನು.

ನನ್ನ ಮಾತಾ-ಪಿತರಾದ ಶಿವ ಪಾರ್ವತಿಯರಲ್ಲಿ ಇಡೀ ಜಗತ್ತೇ ಮೈದುಂಬಿರಲು, ಅವರೇ ಸರ್ವಸ್ವವಾಗಿರುವಾಗ ನಾನು ಬೇರೆಲ್ಲೂ ಹೋಗಬೇಕಾದ ಅವಶ್ಯಕತೆಯಿಲ್ಲ ಎಂದು ಗಣೇಶ ತನ್ನ ನಿಲುವನ್ನು ಸಮರ್ಥಿಸಿಕೊಂಡನು.

ಕೊನೆಗೆ ಗಣೇಶನೇ ಪಂದ್ಯ ಗೆದ್ದ... ಜತೆಗೆ ಆ ಸುಂದರ ಹಣ್ಣಗಳನ್ನೂ ತನ್ನದಾಗಿಸಿಕೊಂಡ ಪ್ರಥಮ ಪೂಜ್ಯ ಗಣೇಶ.

ಈ ಕಥೆಯು ನಮಗೆ ಬುದ್ಧಿವಂತಿಕೆಯ ಪ್ರಾಧಾನ್ಯತೆಯನ್ನು ತಿಳಿಸಿಕೊಡುತ್ತದೆ. ಹೀಗೆ ಶಕ್ತಿಯೆದುರು ಯುಕ್ತಿಯ ಶ್ರೇಷ್ಠತೆಯಾಗಿ ಅಥವಾ ಬಾಹ್ಯ ಶಕ್ತಿಗಳ ವಿರುದ್ಧವಾಗಿ ಶ್ರೇಷ್ಠತೆಯ ಒಂದು ಸಂಕೇತವಾಗಿದ್ದಾನೆ ನಮ್ಮ ಡೊಳ್ಳು ಹೊಟ್ಟೆ ಗಣಪ.

Share this Story:

Follow Webdunia kannada