Webdunia - Bharat's app for daily news and videos

Install App

ಹೋಳಿ ಆಚರಣೆ ಯಾಕೆ ಮಾಡ್ತಾರೆ..?

Webdunia
ಶುಕ್ರವಾರ, 18 ಮಾರ್ಚ್ 2022 (07:05 IST)
ಭಾರತದಾದ್ಯಂತ ಹೋಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಎಲ್ಲರೂ ಆಚರಿಸಲಾಗುತ್ತದೆ.
 
ಯಾವುದೇ ಜಾತಿ ಮತಗಳ ಭೇದವಿಲ್ಲದೆ ಒಟ್ಟಾಗಿ ಸೇರಿ ಬಣ್ಣಗಳ ಓಕುಳಿಯಾಟದಲ್ಲಿ ಮಿಂದೇಳುತ್ತಾರೆ. ಯಾವುದೇ ಹಬ್ಬವೂ ತನ್ನದೇ ಆದ ಆಚಾರ ಸಂಪ್ರದಾಯಗಳನ್ನು ಹೊಂದಿರುತ್ತದೆ.

ಅದೇ ರೀತಿ ಹೋಳಿ ಬಣ್ಣಗಳ ಹಬ್ಬವಾಗಿದ್ದು, ದೂರದ ಊರಿನವರು ತಮ್ಮ ತಾಯ್ನಾಡಿಗೆ ಬಂದು ಈ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬವನ್ನು ವಸಂತ ಮಾಸದಲ್ಲಿ ಆಚರಿಸಲಾಗುತ್ತದೆ. ಚಳಿಗಾಲದ ಕೊನೆಯನ್ನು ವಸಂತದ ಆಗಮನವನ್ನು ಸಾರುವ ಹಬ್ಬವಾಗಿದೆ. ಜನರು ಬಣ್ಣಗಳನ್ನು ಪರಸ್ಪರ ಎರಚಿಕೊಳ್ಳುವ ಮೂಲಕ ಈ ಹಬ್ಬವನ್ನು ಆಚರಿಸುತ್ತಾರೆ.

ಹೋಳಿ ಹಬ್ಬವನ್ನು ದಿನದಂದು ಮಕ್ಕಳಿಂದ ದೊಡ್ಡವರ ತನಕ ಸಂಭ್ರಮ ಸಡಗರದಿಂದ ಆಚರಿಸುತ್ತಾರೆ. ಈ ಹಬ್ಬದ ಆಚರಣೆಯಲ್ಲಿ ದಿನ ಕಾಮನ ಸುಂದರ ಪ್ರತಿಮೆ ಮಾಡಿ ಶೃಂಗರಿಸಿ ಊರಿನ ಕಾಮನ ಕಟ್ಟೆಯ ಮೇಲೆ ಚಪ್ಪರ ಕಟ್ಟಿ ಇಡುತ್ತಾರೆ. ಕಾಮನ ಮುಂದೆ ಮಂಗಳ ವಾದ್ಯಗಳನ್ನು ಊದುತ್ತಾರೆ ಅದಲ್ಲದೆ ಪರಸ್ಪರ ಬೈಗುಳ, ಬಣ್ಣದ ನೀರು, ಸಗಣಿಯ ಗಂಜಲಗಳನ್ನು ಎರಚುತ್ತಾರೆ.

ಹೋಳಿಯ ಇತಿಹಾಸ?
ಪೂರ್ವದಲ್ಲಿ ತಾರಕಾಸುರನೆಂಬ ರಾಕ್ಷಸನಿದ್ದನು. ಆತ ದುರಹಂಕಾರಿಯೂ ಹಾಗೂ ಕ್ರೂರಿಯೂ ಆಗಿದ್ದನು. ತಾರಕಾಸುರ ತನಗೆ ಸಾವು ಬರದಿರಲಿ ಎಂದು ತಪಸ್ಸು ಮಾಡಿದ್ದನು. ಆಗ ಬ್ರಹ್ಮ ಪ್ರತ್ಯಕ್ಷನಾಗುತ್ತಾನೆ.

ಆಗ ನನಗೆ ಮರಣ ಬಾರದಿರಲಿ, ಬಂದರೂ ಅದು ಶಿವನಿಗೆ ಜನಿಸಿದ ಏಳು ದಿನದ ಶಿಶುವಿನಿಂದ ಬರಲಿ ಎಂಬ ವರವನ್ನು ಕೇಳಿದ್ದನು. ತಾರಕಾಸುರನ ತಪ್ಪಸ್ಸನ್ನು ಮೆಚ್ಚಿ ಬ್ರಹ್ಮ ವರವನ್ನು ಕೊಡುತ್ತಾನೆ. ಆಗ ತನಗೆ ವರ ಸಿಕ್ಕಿದೆ ಎಂದು ತಾರಕಾಸುರ ಮೆರೆಯುತ್ತಿರುತ್ತಾನೆ.

ಇತ್ತ ಭೋಗ ಸಮಾಧಿಯಲ್ಲಿದ್ದ ಶಿವ, ಪಾರ್ವತಿಯ ಜೊತೆ ಸಮಾಗಮ ಹೊಂದಲು ಸಾದ್ಯವಿರಲಿಲ್ಲ. ಆಗ ದೇವತೆಗಳು ಪಾರ್ವತಿಯಲ್ಲಿ ಮೋಹ ಹೊಂದುವಂತೆ ಮಾಡಲು ಕಾಮನಲ್ಲಿ ಬೇಡಿದರು.

ಕಾಮ ಅಂದರೆ (ಮನ್ಮಥ) ಮತ್ತು ಅವನ ಪತ್ನಿ ರತಿದೇವಿ ಈ ಸತ್ಕಾರ್ಯಕ್ಕೆ ಒಪ್ಪಿದ್ದರು. ಈ ವೇಳೆ ಭೋಗಸಮಾಧಿಯಲ್ಲಿದ್ದ ಶಿವನಿಗೆ ಹೂ ಬಾಣಗಳಿಂದ ಹೊಡೆದು ಸಮಾಧಿಯಿಂದ ಎಚ್ಚರಿಸಿದರು. ಇದರಿಂದ ಕುಪಿತಗೊಂಡ ಶಿವನು ತನ್ನ ಮೂರನೇ ಕಣ್ಣಿಂದ ಕಾಮನನ್ನು ಸುಟ್ಟು ಭಸ್ಮ ಮಾಡಿದನು.

ರತಿದೇವಿ ದು:ಖದಿಂದ ಶಿವನಲ್ಲಿ ಪತಿಭಿಕ್ಷೆಯನ್ನು ಬೇಡಿದಳು. ಶಾಂತಗೊಂಡ ಶಿವನು ಪತ್ನಿಯೊಡನೆ ಮಾತ್ರ ಶರೀರಿಯಾಗುವಂತೆ ಕಾಮನಿಗೆ ವರ ಕೊಟ್ಟನು. ಲೋಕಕಲ್ಯಾಣಕ್ಕಾಗಿ ಮನ್ಮಥನು ಅನಂಗನಾದ. ಈ ಘಟನೆ ನಡೆದದ್ದು ಫಾಲ್ಗುಣ ಶುದ್ಧ ಪೂರ್ಣಿಮೆಯಂದು. ಆದ್ದರಿಂದ ಈ ದಿನವನ್ನು “ಕಾಮನ ಹುಣ್ಣಿಮೆ”ಯಾಗಿ ಆಚರಿಸಲ್ಪಡುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಹಾರ ತಿಂದ ತಕ್ಷಣ ನೀರು ಕುಡಿಯಬಾರದೇಕೆ

ಸ್ಕಿನ್ ಟ್ಯಾನ್ ಆಗುತ್ತಿದ್ದರೆ ಏನು ಮಾಡಬೇಕು

ಪ್ರಯಾಣದಲ್ಲಿ ಕಾಡುವ ವಾಂತಿ ತಡೆಯಲು ಇಲ್ಲಿದೆ ಕೆಲ ಟಿಪ್ಸ್‌

ಕೈ ಜೋಮು ಹಿಡಿದಂತಾಗುತ್ತಿದೆಯೇ ಹಾಗಿದ್ದರೆ ಕಡೆಗಣಿಸಬೇಡಿ

ಸೋಮವಾರಗಳಂದು ನಮ್ಮ ಮೂಡ್ ಹೇಗಿರುತ್ತದೆ: ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ

ಮುಂದಿನ ಸುದ್ದಿ