Select Your Language

Notifications

webdunia
webdunia
webdunia
webdunia

5 ದಿನಗಳ ಸಾರಿಗೆ ನೌಕರರ ಮುಷ್ಕರ ಅಂತ್ಯ ಹಿನ್ನಲೆ; ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ

5 ದಿನಗಳ ಸಾರಿಗೆ ನೌಕರರ ಮುಷ್ಕರ ಅಂತ್ಯ ಹಿನ್ನಲೆ; ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ
ಬೆಂಗಳೂರು , ಸೋಮವಾರ, 14 ಡಿಸೆಂಬರ್ 2020 (11:15 IST)
ಬೆಂಗಳೂರು : 5 ದಿನಗಳ ಸಾರಿಗೆ ನೌಕರರ ಮುಷ್ಕರ ಅಂತ್ಯ ಹಿನ್ನಲೆಯಲ್ಲಿ ಸಾರಿಗೆ ಸಿಬ್ಬಂದಿ ಮುಷ್ಕರ ವಾಪಾಸ್ ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ  ಕೋಡಿಹಳ್ಳಿ ಚಂದ್ರಶೇಖರ್ ಕಚೇರಿಗೆ ಆಗಮಿಸಿದ್ದಾರೆ.

ಗಾಂಧಿ ನಗರದ ಕಚೇರಿಗೆ ಕಾಲ್ನಡಿಗೆಯಲ್ಲಿ ಬಂದ ಕೋಡಿಹಳ್ಳಿ ಚಂದ್ರಶೇಖರ್ ಈ ಬಗ್ಗೆ ಪ್ರತಿಭಟನಾಕಾರರ ಜೊತೆ ಚರ್ಚಿಸಲಿದ್ದು, ಬಳಿಕ ಅವರು  ಕೆಲವೇ ಕ್ಷಣಗಳಲ್ಲಿ ಅಧಿಕೃತ ಫೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.

ಹಾಗೇ ಸಾರಿಗೆ ನೌಕರರ ಮುಷ್ಕರ ಅಂತ್ಯ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಸಚಿವ ಲಕ್ಷ್ಮಣ್ ಸವದಿ, ಡಿಸಿಎಂ ಅಶ್ವತ್ಥ್ ನಾರಾಯಣ್, ಡಿಸಿಎಂ ಕಾರಜೋಳ, ಬಸವರಾಜ್ ಬೊಮ್ಮಾಯಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಟೀ ಟ್ರೀ ಆಯಿಲ್ ಪ್ರಾಣಿಗಳ ಮೇಲೆ ಬಳಸುವುದು ಸುರಕ್ಷಿತವೇ?