ಸೋಡಾ ಅಥವಾ ಸಕ್ಕರೆ ಅಂಶ ಹೊಂದಿರುವ ಪಾನೀಯಗಳನ್ನು ದಿನ ಸೇವಿಸುವುದರಿಂದ ಏನಾಗುತ್ತೆ ಗೊತ್ತಾ…?

Webdunia
ಸೋಮವಾರ, 9 ಏಪ್ರಿಲ್ 2018 (06:28 IST)
ಬೆಂಗಳೂರು : ಸೋಡಾ ಅಥವಾ ಸಕ್ಕರೆ ಅಂಶ ಹೊಂದಿರುವ ಪಾನೀಯಗಳನ್ನು ದಿನಕ್ಕೊಮ್ಮೆ ಸೇವಿಸುವುದು ಗರ್ಭಧಾರಣೆಯ ಸಾಧ್ಯತೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಹೊಸ ಅಧ್ಯಯನ ವರದಿಯೊಂದು ಎಚ್ಚರಿಸಿದೆ.


ಸಕ್ಕರೆ ಅಂಶ ಹೆಚ್ಚಿರುವ ಪಾನೀಯಗಳನ್ನು ಪ್ರತಿ ನಿತ್ಯ ಸೇವಿಸುವುದರಿಂದ ಪುರುಷರು ಹಾಗೂ ಮಹಿಳೆಯರಲ್ಲಿ ಸಂತಾನೋತ್ಪತ್ತಿ ಸಾಧ್ಯತೆ ಶೇ.33 ರಷ್ಟು ಕಡಿಮೆಯಾಗುತ್ತದೆ ಎಂದು ಬೋಸ್ಟನ್ ವಿಶ್ವವಿದ್ಯಾನಿಲಯದ ಪಬ್ಲಿಕ್ ಹೆಲ್ತ್ ವಿಭಾಗ ನಡೆಸಿರುವ ಅಧ್ಯಯನದಿಂದ ತಿಳಿದುಬಂದಿದೆ.


ಪ್ರತಿದಿನ ಸೋಡಾ ಸೇವಿಸುವುದರಿಂದ ಮಹಿಳೆಯರಲ್ಲಿ ಸಂತಾನೋತ್ಪತ್ತಿ ಸಾಧ್ಯತೆ ಶೇ.25 ರಷ್ಟು ಕಡಿಮೆಯಾದರೆ ಪುರುಷರಲ್ಲಿ ಶೇ.33 ರಷ್ಟು ಕಡಿಮೆಯಾಗುತ್ತದೆ. ಸಂತಾನೋತ್ಪತ್ತಿ ಸಾಧ್ಯತೆ ಕುಗ್ಗುವುದು ಹಾಗೂ ಸೋಡಾ ಸೇವಿಸುವುದಕ್ಕೂ ಸಕಾರಾತ್ಮಕ ಸಂಬಂಧವಿದೆ ಎಂದು ಅಧ್ಯಯನ ತಂಡದಲ್ಲಿದ್ದ ಎಲಿಜಬೆತ್ ಹ್ಯಾಚ್ ಹೇಳಿದ್ದಾರೆ.


ಸಂತಾನಕ್ಕಾಗಿ ಯತ್ನಿಸುತ್ತಿರುವವರು ಈ ರೀತಿಯ ಪಾನಿಯಗಳನ್ನು ಸೇವಿಸುವುದನ್ನು ಕಡಿಮೆ ಮಾಡಬೇಕು ಎಂದು ಅಧ್ಯಯನ ತಂಡ ಸಲಹೆ ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments