Webdunia - Bharat's app for daily news and videos

Install App

ಮೊಸರು ಸೇವಿಸಿ ಆರೋಗ್ಯ ವೃದ್ಧಿಸಿ

Webdunia
ಸೋಮವಾರ, 12 ಜೂನ್ 2017 (19:07 IST)
ಬೆಂಗಳೂರು: ಪ್ರಕೃತಿ ವರವಾಗಿ ನೀಡಿರುವ ಹಲವಾರು ನೈಸರ್ಗಿಕ ಆಹಾರಗಳಲ್ಲಿ ಮೊಸರು ಕೂಡ ಒಂದು. ಮೊಸರಿನಲ್ಲಿ ಅನೇಕ ಪೋಷಕಾಂಶ ಮತ್ತು ಆರೋಗ್ಯಕ್ಕೆ ಅಗತ್ಯವಿರುವ ಅಂಶವಿದೆ. ಕೇವಲ ಆರೋಗ್ಯಕ್ಕೆ ಮಾತ್ರವಲ್ಲ, ಮೊಸರನ್ನು ಸೌಂದರ್ಯ ವೃದ್ಧಿಗೂ ಬಳಸಲಾಗುತ್ತದೆ. ಮೊಸರು ಮುಪ್ಪನ್ನು ಮುಂದೂಡುತ್ತದೆ ಎಂಬ ಮಾತಿದೆ.
 
ಇಲ್ಲಿ ಆರೋಗ್ಯದ ದೃಷ್ಟಿಯಿಂದ ಮೊಸರಿನ ಕೆಲವು ಉಪಯೋಗಗಳ ಬಗ್ಗೆ ಮಾಹಿತಿ ನೀಡಲಾಗಿದೆ:
 
* ಮೊಸರಿನಲ್ಲಿನ ಕ್ಯಾಲ್ಸಿಯಂ ಮೂಳೆಗಳ ಬೆಳವಣಿಗೆಗೆ ಸಹಕಾರಿಯಾಗಿದೆ. 
 
* ಮೊಸರು ಜೀರ್ಣ ಕ್ರಿಯೆಯನ್ನು ಹೆಚ್ಚಿಸುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
 
* ಸಂಧಿವಾತದ ವಿರುದ್ಧ ಹೋರಾಡಲು ಮೊಸರು ಸಹಕಾರಿ
 
* ಬೇಧಿ, ಮಲಬದ್ಧತೆ, ನಿದ್ರಾಹೀನತೆ, ಕಾಮಾಲೆಯಂತಹ ಕಾಯಿಲೆಗಳಿಗೆ ಮೊಸರು ಅತ್ಯುತ್ತಮ ಔಷಧ.
 
* ಒಂದು ಕಪ್ ಮೊಸರಿಗೆ ಒಂದು ಚಮಚ ಜೇನುತುಪ್ಪ ಬೆರಸಿ ಸೇವಿಸಿದರೆ ಬಾಯಿಹುಣ್ಣು ನಿವಾರಣೆಯಾಗುತ್ತದೆ.
 
* ದೇಹಕ್ಕೆ ಉತ್ತಮ ರೀತಿಯ ಕೊಲೆಸ್ಟ್ರಾಲ್ ನೀಡಿ, ಹೃದಯದ ಆರೋಗ್ಯಕ್ಕೆ ಹಾನಿಯಾಗುವಂಥ ಕೊಲೆಸ್ಟ್ರಾಲ್‌ಗಳನ್ನು ಕಡಿಮೆ ಮಾಡುತ್ತದೆ.
 
* ರಕ್ತದೊತ್ತಡವನ್ನು ಕಡಿಮೆ ಮಾಡುವ ಮೂಲಕ ಹೃದಯಾಘಾತದ ಸಂಭವವನ್ನು ತಪ್ಪಿಸುತ್ತದೆ.
 
* ಅಜೀರ್ಣದಿಂದ ಬಳಲುತ್ತಿರುವವರು ಒಂದು ಕಪ್ ಮೊಸರಿಗೆ 2 ಚಿಟಿಕೆ ಕಾಳುಮೆಣಸಿನ ಪುಡಿ, 2 ಚಿಟಿಕೆ ಜೀರಿಗೆ ಪುಡಿ ಹಾಗೂ ಒಂದು ಚಿಟಿಕೆ ಸೈಂಧಲವಣವನ್ನು ಬೆರೆಸಿ ಸೇವಿಸಿದರೆ ಅಜೀರ್ಣ ಸಮಸ್ಯೆ ನಿವಾರಣೆಯಾಗುತ್ತದೆ.
 

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments