Publish Date: Mon, 05 Jan 2026 (18:48 IST)
Updated Date: Mon, 05 Jan 2026 (18:58 IST)
ಬೆಂಗಳೂರು: ದಿನಕ್ಕೊಂದು ಸೇಬು ತಿಂದರೆ ವೈದ್ಯರಿಂದ ದೂರವಿರಬಹುದು ಎಂಬ ಗಾದೆ ಮಾತಿನಂತೆ, ಇದರಲ್ಲಿರುವ ಪೋಷಕಾಂಶಗಳು ನಮ್ಮ ದೇಹವನ್ನು ಆರೋಗ್ಯಯುತವಾಗಿ ಇರಿಸುತ್ತದೆ.
ಸೇಬಿನ ಪ್ರಮುಖ ಆರೋಗ್ಯ ಪ್ರಯೋಜನಗಳು ಇಲ್ಲಿವೆ:
1. ಹೃದಯದ ಆರೋಗ್ಯಕ್ಕೆ ಉತ್ತಮ: ರಕ್ತದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರಲ್ಲಿರುವ ಪಾಲಿಫೆನಾಲ್ ಎಂಬ ಉತ್ಕರ್ಷಣ ನಿರೋಧಕಗಳು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತವೆ.
2. ತೂಕ ಇಳಿಸಲು ಸಹಕಾರಿ
ಸೇಬಿನಲ್ಲಿ ನಾರಿನಂಶ ಮತ್ತು ನೀರಿನಂಶ ಹೆಚ್ಚಾಗಿದ್ದು, ಇದನ್ನು ಸೇವಿಸಿದರೆ ಹೊಟ್ಟೆ ತುಂಬಿದ ಅನುಭವ ಆಗಿರುವುದರಿಂದ ಪದೇ ಪದೇ ಹಸಿವು ಆಗುವುದಿಲ್ಲ. ಇದು ತೂಕ ಇಳಿಸಲು ಬಯಸುವವರಿಗೆ ಅತ್ಯುತ್ತಮ ಹಣ್ಣು.
*ಜೀರ್ಣಕ್ರಿಯೆ ಸುಧಾರಣೆ: ಕರುಳಿನ ಆರೋಗ್ಯವನ್ನು ವೃದ್ಧಿಸಿ, ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.
*ಮಧುಮೇಹದ ನಿಯಂತ್ರಣ: ಸೇಬು ಹಣ್ಣು ತಿನ್ನುವುದರಿಂದ ಟೈಪ್-2 ಮಧುಮೇಹ ಬರುವ ಸಾಧ್ಯತೆ ಕಡಿಮೆ ಇರುತ್ತದೆ ಎಂದು ಹಲವು ಸಂಶೋಧನೆಗಳು ತಿಳಿಸಿವೆ. ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತದೆ.
*ರೋಗನಿರೋಧಕ ಶಕ್ತಿ ಹೆಚ್ಚಳ: ಇದರಲ್ಲಿರುವ ವಿಟಮಿನ್ ಸಿ ಮತ್ತು ಆಂಟಿ-ಆಕ್ಸಿಡೆಂಟ್‌ಗಳು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ, ಇದರಿಂದ ಸಾಂಕ್ರಾಮಿಕ ಕಾಯಿಲೆಗಳ ವಿರುದ್ಧ ಹೋರಾಡಲು ದೇಹಕ್ಕೆ ಶಕ್ತಿ ಸಿಗುತ್ತದೆ.
ಮೆದುಳಿನ ಆರೋಗ್ಯ: ಸೇಬಿನ ರಸವು ವಯಸ್ಸಾದಂತೆ ಬರುವ ಜ್ಞಾಪಕಶಕ್ತಿ ನಷ್ಟ ಅಥವಾ ಅಲ್ಝೈಮರ್ ಕಾಯಿಲೆಯ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.