Select Your Language

Notifications

webdunia
webdunia
webdunia
webdunia

ಮುಖದ ಮೇಲಿರುವ ಕಪ್ಪು ಕಲೆಗಳನ್ನು ಹೋಗಲಾಡಿಸಲು ಹೀಗೆ ಮಾಡಿ

ಮುಖದ ಮೇಲಿರುವ ಕಪ್ಪು ಕಲೆಗಳನ್ನು ಹೋಗಲಾಡಿಸಲು ಹೀಗೆ ಮಾಡಿ
ಬೆಂಗಳೂರು , ಮಂಗಳವಾರ, 28 ಮೇ 2019 (08:53 IST)
ಬೆಂಗಳೂರು : ಮುಖದ ಮೇಲಿರುವ ಕಪ್ಪು ಕಲೆ ಮುಖದ ಅಂದವನ್ನು ಕೆಡಿಸುತ್ತದೆ. ಈ ಕಲೆ ಹೋಗಲಾಡಿಸಲು ಬ್ಯೂಟಿಪಾರ್ಲರ್ ಗೆ ಹೋಗಿ ಹಣ, ಸೌಂದರ್ಯ ಎರಡನ್ನು ಹಾಳು ಮಾಡಿಕೊಳ್ಳುವ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ.




* ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಇದರಿಂದ ಕಪ್ಪುಕಲೆ ಮಾಯವಾಗುತ್ತದೆ.

* ಮಜ್ಜಿಗೆಯಲ್ಲಿ ಲ್ಯಾಕ್ಟಿಕ್ ಆಮ್ಲವಿರುತ್ತದೆ. ಇದು ಕಲೆಗಳನ್ನು ಕಡಿಮೆ ಮಾಡುವ ಕೆಲಸ ಮಾಡುತ್ತದೆ. ಇದು ಪಿಗ್ಮೆಂಟೇಶನ್ ಸಮಸ್ಯೆಯನ್ನು ಕೂಡ ದೂರ ಮಾಡುತ್ತದೆ.

* ನಿಂಬೆ ರಸದಲ್ಲಿ ಸಿಟ್ರಿಕ್ ಆಮ್ಲವಿರುತ್ತದೆ. ನಿಂಬೆ ರಸವನ್ನು ಮುಖಕ್ಕೆ ಹಚ್ಚಿ ಮಸಾಜ್ ಮಾಡಿದ್ರೆ ಮುಖ ಸ್ವಚ್ಛವಾಗಿ ಕಪ್ಪು ಕಲೆ ಮಾಯವಾಗುತ್ತದೆ

* ಮೊದಲು ಅಲೋವೇರಾ ರಸಕ್ಕೆ ನಿಂಬೆ ರಸ, ಮಜ್ಜಿಗೆಯನ್ನು ಮಿಕ್ಸ್ ಮಾಡಿ. ಇದನ್ನು ಮುಖಕ್ಕೆ ಹಚ್ಚಿ 5 ನಿಮಿಷ ಬಿಟ್ಟು ಮುಖವನ್ನು ತೊಳೆಯಿರಿ.

* ಆಪಲನ್ನು ಮುಖಕ್ಕೆ ಹಚ್ಚಿ 5 ನಿಮಿಷ ಬಿಟ್ಟು ಮುಖವನ್ನು ಸ್ವಚ್ಛಗೊಳಿಸಿ. ವಾರಕ್ಕೆ 2-3 ಬಾರಿ ಹೀಗೆ ಮಾಡಿದ್ರೆ ಮುಖದ ಕಲೆ ಮಾಯವಾಗುತ್ತದೆ.



 

 
 

Share this Story:

Follow Webdunia kannada

ಮುಂದಿನ ಸುದ್ದಿ

ರಿಮೂವರ್ ಇಲ್ಲದೆ ನೈಲ್ ಪಾಲಿಶ್ ತೆಗೆಯುವುದು ಹೇಗೆ ಗೊತ್ತಾ?