Select Your Language

Notifications

webdunia
webdunia
webdunia
webdunia

ಬಾಳೆಎಲೆಯಲ್ಲಿ ಊಟ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಬಾಳೆಎಲೆಯಲ್ಲಿ ಊಟ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?
ಬೆಂಗಳೂರು , ಶನಿವಾರ, 19 ಮೇ 2018 (06:36 IST)
ಬೆಂಗಳೂರು : ಹಿಂದೂ ಧರ್ಮದ ಶಾಸ್ತ್ರಗಳಲ್ಲಿ ಮತ್ತು ಸಮಾರಂಭಗಳಲ್ಲಿ ಬಾಳೆ ಎಲೆಗೆ ತನ್ನದೆ ಆದ ಮಹತ್ವ ಇದೆ. ಮದುವೆ, ದೇವಾಲಯಗಳ ಪ್ರಸಾದ ಭೋಜನ, ಅನ್ನಸಂತರ್ಪಣೆಗಳಲ್ಲಿ ಬಾಳೆ ಎಲೆಯ ಮೇಲೆ ಊಟವನ್ನು ಬಡಿಸಲಾಗುತ್ತದೆ. ಬಾಳೆ ಎಲೆಯ ಮೇಲೆ ಮಾಡುವ ಊಟದ ರುಚಿಯೇ ಬೇರೆ, ಅದು ಸಂಪ್ರದಾಯ ಸಹ ಹೌದು. ಹಾಗೇ ಬಾಳೆ ಎಲೆಯಲ್ಲಿ ಊಟ ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ಅನೇಕ ಪ್ರಯೋಜನಗಳು  ಕೂಡ ಇವೆ.


*ಬಾಳೆ ಎಲೆಯ ಮೇಲ್ಪದರದ ರಚನೆಯಲ್ಲಿ ಎಪಿಗಾಲ್ಲೋಕ್ಯಾಟೆಚಿನ್ ಗ್ಯಾಲೆಟ್ ಎಂಬ ಪಾಲಿಫಿನಾಲ್ ಅಂಶವಿರುತ್ತದೆ. ಬಿಸಿ ಆಹಾರದ ಎಲೆಗೆ ಬಿದ್ದಾಕ್ಷಣ ಇವು ಆಹಾರದೊಂದಿಗೆ ಬೆರೆತು ನಮ್ಮ ಹೊಟ್ಟೆ ಸೇರುತ್ತವೆ. ಇದರಿಂದ ಜೀರ್ಣಕ್ರಿಯೆ ಚೆನ್ನಾಗಿರುತ್ತದೆ.
*ಚೆನ್ನೈನ ಆಯುರ್ವೇದ ತಜ್ಞರ ಪ್ರಕಾರ ಸಣ್ಣ ವಯಸ್ಸಿನಲ್ಲೇ ಬಿಳಿಕೂದಲಿನ ಸಮಸ್ಯೆ ಇದ್ದವರು ನಿತ್ಯ ಬಾಳೆ ಎಲೆಯಲ್ಲಿ ಊಟ ಮಾಡಿದರೆ ಒಳ್ಳೆಯ ಫಲಿತಾಂಶ ಸಿಗುತ್ತದಂತೆ.


*ಬಾಳೆ ಎಲೆಯಲ್ಲಿ ಅಧಿಕ ಪ್ರಮಾಣದ ವಿಟಮಿನ್ ‘ಡಿ’ ಶೇಖರಣೆಗೊಂಡಿರುತ್ತದೆ. ಹೀಗಾಗಿ ಹಸುಗೂಸುಗಳನ್ನು ಶುಂಠಿ ಎಣ್ಣೆಲೇಪಿತ ಬಾಳೆಎಲೆಯಿಂದ ಸುತ್ತಿ ಸೂರ್ಯನ ಕಿರಣಗಳಿಗೆ ಹಿಡಿಯುತ್ತಾರೆ. ಭವಿಷ್ಯದಲ್ಲಿ ಚರ್ಮರೋಗಗಳು ಬಾರದಂತೆ ತಡೆಯುವ ವೈದ್ಯೋದ್ದೇಶ ಇದರದ್ದು. ತೆಂಗಿನೆಣ್ಣೆ ಲೇಪಿತ ಬಾಳೆ ಎಲೆಯನ್ನು ಸುಕ್ಕಾಗಿರುವ ಚರ್ಮದ ಸುತ್ತ ಸುತ್ತಿದರೆ ಕೆಲವೇ ದಿನಗಳಲ್ಲಿ ಒಳ್ಳೆಯ ರಿಸಲ್ಟ್ ಸಿಗುತ್ತದೆ.


*ನೀವು ತಟ್ಟೆಗಳಲ್ಲಿ ಊಟ ಮಾಡಿದರೆ ಅವುಗಳಲ್ಲಿ ಮಾರ್ಜಕದ ಕಣಗಳು ನಿಮ್ಮ ಹೊಟ್ಟೆ ಸೇರಬಹುದು. ಆದರೆ, ಬಾಳೆ ಎಲೆಯಲ್ಲಿ ಈ ಸಮಸ್ಯೆಯೇ ಇರುವುದಿಲ್ಲ.


*ಬಾಳೆ ಎಲೆ ಊಟ ಆರೋಗ್ಯಕ್ಕೆ ತಂಪು. ಗ್ಯಾಸ್ ಅಡುಗೆಯಿಂದ ಆಹಾರವನ್ನು ಸೇರಿಕೊಳ್ಳುವ ಕೃತಕ ಉಷ್ಣವೂ ಇಲ್ಲಿ ತಣ್ಣಗಾಗುತ್ತದೆ.


*ಬಾಳೆ ಎಲೆಯ ಮೇಲೆ ಬ್ಯಾಕ್ಟೀರಿಯಾಗಳು ಬಾಳುವುದಿಲ್ಲ. ಇದರಲ್ಲಿ ಏನೇ ಆಹಾರ ಬಡಿಸಿದರೂ ಹೊಟ್ಟೆಗೆ ಹೋಗುವ ಮುನ್ನವೇ ಕೊಲ್ಲಲ್ಪಡುತ್ತವೆ. ಅದರಲ್ಲೂ ಕ್ಯಾನ್ಸರ್ ರೋಗಕ್ಕೆ ಕಾರಣವಾಗುವ ಫ್ರೀ ರಾಡಿಕಲ್ (Free radicals) ಎಂಬ ಜೈವಿಕ ರಾಸಾಯನಿಕಗಳನ್ನು ಇದು ದೇಹ ಸೇರಲು ಬಿಡುವುದೇ ಇಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆಯರ ಮಾನಸಿಕ ದೈಹಿಕ ತೊಂದರೆಗೆ ಇಲ್ಲಿದೆ ಪರಿಹಾರ