Webdunia - Bharat's app for daily news and videos

Install App

ಖಾಲಿ ಹೊಟ್ಟೆಯಲ್ಲಿ ಈ ಹಣ್ಣನ್ನು ತಿಂದರೆ ಜೀವಕ್ಕೆ ಅಪಾಯವಂತೆ

Webdunia
ಮಂಗಳವಾರ, 14 ಆಗಸ್ಟ್ 2018 (10:15 IST)
ಬೆಂಗಳೂರು : ಹಣ್ಣುಗಳನ್ನು ತಿಂದರೆ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುತ್ತಾರೆ. ಆದರೆ ಈ ಒಂದು ಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ತಿಂದರೆ ಮಾತ್ರ ಸಾವು ಸಂಭವಿಸುವುದು ಖಚಿತವಂತೆ.


ಹೌದು ಕಳೆದ ಎರಡು ದಶಕಗಳಿಂದ ಬಿಹಾರದ ಮುಜಾಫರ್ ನಗರದ ಮಕ್ಕಳನ್ನು ನಿಗೂಢವಾಗಿ ಕಾಡುತ್ತಿದ್ದ ಖಾಯಿಲೆಯ ಹಿಂದಿನ ರಹಸ್ಯವನ್ನು ವಿಜ್ಞಾನಿಗಳು ಕೊನೆಗೂ ಕಂಡುಹಿಡಿದಿದ್ದಾರೆ. ಅದಕ್ಕೆ ಕಾರಣ ಲಿಚ್ಚಿ ಹಣ್ಣು.  ಅಮೇರಿಕಾ ಮತ್ತು ಭಾರತದ ನುರಿತ ವೈದ್ಯರನ್ನೊಳಗೊಂಡ ತಂಡದ ಸದಸ್ಯರು ಜಂಟಿ ಸಂಶೋಧನೆ ನಡೆಸಿದಾಗ ಕಂಡು ಬಂದ ಸತ್ಯ ಇದು.


ಲಿಚ್ಚಿಯಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ. ಇದು ಹೆಚ್ಚಾದರೆ ಸಾವು ಕೂಡ ಸಂಭವಿಸಬಹುದು ಎಂದು ವೈದ್ಯರು ಎಚ್ಚರಿಸಿದ್ದಾರೆ. ಈ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಗೆ  ತುತ್ತಾಗುವ ಮಕ್ಕಳಲ್ಲಿ ಶೇ.40 ಮಕ್ಕಳು ಸಾವನ್ನಪ್ಪುತ್ತಿದ್ದಾರೆ ಎಂಬ ಗಂಭೀರ ಅಂಶವನ್ನೂ ವೈದ್ಯರು ಬಯಲಿಗೆಳೆದಿದ್ದಾರೆ.


ಈ ಲಿಚ್ಚಿ ಹಣ್ಣನ್ನು ಮಕ್ಕಳಾಗಲಿ ಅಥವಾ ದೊಡ್ಡವರಾಗಲಿ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಅಪರೂಪದ  ಪ್ರಕರಣಗಳಲ್ಲಿ ಸಾವು ಕೂಡ ಸಂಭವಿಸಬಹುದು ಎಂದೂ ವೈದ್ಯರು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.


ಅತೀ ಹೆಚ್ಚು ಪ್ರಮಾಣದಲ್ಲಿ ಲಿಚ್ಚಿ  ಸೇವಿಸುವುದರಿಂದ ಹೊಟ್ಟೆ ತುಂಬಿದಂತಾಗಿ ಊಟ ಮಾಡುವುದನ್ನು ಬಿಡುತ್ತೇವೆ. ಹೀಗಾದಾಗ ದೇಹದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಕೆಯಾಗಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ ಎಂದೂ ವೈದ್ಯರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕ್ರಿಸ್ಮಸ್ 2024: ಹೆಚ್ಚು ಖರ್ಚು ಮಾಡದೆ ಸೀಕ್ರೆಟ್ ಸಾಂಟಾ ಉಡುಗೊರೆ ಆಯ್ಕೆಗೆ ಇಲ್ಲಿದೆ ಸಲಹೆ

ತೂಕ ಇಳಿಸಿಕೊಳ್ಳಲು ಸರ್ಕಸ್‌ ಮಾಡುತ್ತಿರುವವರು ಈ ರೀತಿ ಮಾಡಿ

ಚಳಿಗಾಲದಲ್ಲಿ ಇಡ್ಲಿ ಹಿಟ್ಟು ಹುದುಗು ಬರಲು ಇಲ್ಲಿದೆ ಕೆಲ ಟಿಪ್ಸ್‌

ಚಳಿಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಚಳಿಗಾಲದ ಆಹಾರಗಳು

ಚಳಿಗಾಲದಲ್ಲೂ ಸನ್ ಸ್ಕ್ರೀನ್ ಲೋಷನ್ ಬಳಸಬೇಕಾ

ಮುಂದಿನ ಸುದ್ದಿ
Show comments