Select Your Language

Notifications

webdunia
webdunia
webdunia
webdunia

ಅಂಜೂರ ಹಣ್ಣು ರಕ್ತದೊತ್ತಡ ಸಮಸ್ಯೆ ನಿಯಂತ್ರಣಕ್ಕೆ ಸಹಾಯಕ

ಅಂಜೂರ ಹಣ್ಣು ರಕ್ತದೊತ್ತಡ ಸಮಸ್ಯೆ ನಿಯಂತ್ರಣಕ್ಕೆ ಸಹಾಯಕ
ಮೈಸೂರು , ಸೋಮವಾರ, 18 ಅಕ್ಟೋಬರ್ 2021 (12:36 IST)
ಹಣ್ಣುಗಳನ್ನು ಸೇವಿಸುವ ಮೂಲಕ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ. ಹೀಗಿರುವಾಗ ಅಂಜೂರ ಹಣ್ಣು ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ? ಎಂಬುದನ್ನು ತಿಳಿದುಕೊಳ್ಳಿ.

ಜತೆಗೆ ವಾರಕ್ಕೆ ಎರಡು ಬಾರಿಯಾದರೂ ಅಂಜೂರ ಹಣ್ಣು ಸೇವಿಸುವ ಮೂಲಕ ನಿಮ್ಮ ರಕ್ತದೊತ್ತಡ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.
ಸಾಮಾನ್ಯವಾಗಿ ಕೆಲವು ಹಣ್ಣುಗಳನ್ನು ಒಣಗಿಸಿ ಡ್ರೈಫ್ರೂಟ್ಸ್ ಆಗಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತದೆ. ಹೀಗಿರುವಾಗ ಎಲ್ಲಾ ಕಾಲದಲ್ಲಿಯೂ ಸಹ ಹಣ್ಣುಗಳ ರುಚಿಯನ್ನು ಸವಿಯಬಹುದು ಜತೆಗೆ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ. ಅಂಜೂರ ಹಣ್ಣಿನಲ್ಲಿ ತಾಮ್ರ, ಗಂಧಕ, ವಿಟಮಿನ್ ಎ, ಬಿ ಮತ್ತು ಸಿ ಇತ್ಯಾದಿ ಪೋಷಕಾಂಶಗಳಿಂದ ಸಮೃದ್ಧವಾಗಿರುತ್ತದೆ.
ಕ್ಯಾನ್ಸರ್ ವಿರೋಧಿ ಗುಣ
webdunia

ಅಂಜೂರ ಹಣ್ಣುಗಳು ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿವೆ. ಇದನ್ನು ಪ್ರತಿನಿತ್ಯ ಸೇವಿಸುವುದರಿಂದ ಕ್ಯಾನ್ಸರ್ನಂತಹ ರೋಗಗಳನ್ನು ತಡೆಯಲು ಸಹಾಯಕವಾಗುತ್ತದೆ. ಜತೆಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಇದು ಸಹಾಯಕ. ಇದೊಂದೇ ಅಲ್ಲದೇ ವಿಟಮಿನ್ ಎ ಹೇರಳವಾಗಿರುವುದರಿಂದ ಇದು ಕಣ್ಣಿನ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.
ಮಧುಮೇಹ ಸಮಸ್ಯೆ ನಿಯಂತ್ರಣ
webdunia

ಇದು ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ. ಜತೆಗೆ ರಕ್ತದೊತ್ತಡವನ್ನು ನಿಯಂತ್ರಿಸಿಕೊಳ್ಳಲು ಸಹಾಯಕವಾಗಿದೆ. ಅಂಜೂರದಲ್ಲಿ ಫೈಬರ್, ಪೊಟ್ಯಾಶಿಯಂ, ಒಮೆಗಾ 3 ಮತ್ತು 6 ಕೊಬ್ಬಿನಾಮ್ಲಗಳು ಹೇರಳವಾಗಿದ್ದು, ಕೆಟ್ಟ ಕೊಲೆಸ್ಟ್ರಾಲ್ಅನ್ನು ತೆಗೆದುಹಾಕುವುದರ ಜತೆಗೆ ಅಧಿಕ ಬಿಪಿ ಸಮಸ್ಯೆಯನ್ನು ನಿಯಂತ್ರಿಸುತ್ತದೆ. ಪ್ರತಿ ರಾತ್ರಿ ಅಂಜೂರವನ್ನು ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವ ಅಭ್ಯಾಸ ಒಳ್ಳೆಯದು.
ಮೂಳೆಗಳ ಆರೋಗ್ಯಕ್ಕೆ ಒಳ್ಳೆಯದು
ಅಂಜೂರವನ್ನು ಮೆಗ್ನೀಶಿಯಂ, ಪೊಟ್ಯಾಶಿಯಂ ಮತ್ತು ಕ್ಯಾಲ್ಸಿಯಂನ ಉತ್ತಮ ಮೂಲವೆಂದು ಪರಿಗಣಿಸಲಾಗಿದೆ. ಇದು ಮೂಳೆಗಳ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಅಂಜೂರವನ್ನು ಪ್ರತಿನಿತ್ಯ ಹಾಲಿನೊಂದಿಗೆ ಸೇವಿಸುವುದರಿಂದ ಉತ್ತಮ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಿಸಿ ನೀರು ಕುಡಿಯುವಾಗ ಈ 3 ಪದಾರ್ಥಗಳನ್ನು ಸೇರಿಸಿ