ಪ್ರತಿನಿತ್ಯವೂ ಸಹ ಆರೋಗ್ಯದ ಬಗ್ಗೆ ಕಾಳಜಿ ಮಾಡುವುದು ಅತ್ಯಗತ್ಯ. ಹಾಗಿರುವಾಗ ನೀವು ಸದೃಢರಾಗಲು ಏನೆಲ್ಲಾ ಮಾಡುತ್ತೀರಿ? ಪ್ರತಿನಿತ್ಯ ಅಭ್ಯಾಸದಲ್ಲಿ ಯಾವೆಲ್ಲಾ ವಿಷಯಗಳನ್ನು ತೊಡಗಿಸಿಕೊಳ್ಳಬೇಕು? ಎಂಬುದರ ಬಗ್ಗೆ ಕೆಲವು ಮಾಹಿತಿಗಳು ಈ ಕೆಳಗಿನಂತಿದೆ.
ಈ ಕೆಲವು ಟಿಪ್ಸ್ಗಳನ್ನು ನೀವು ಪಾಲಿಸುವುದರಿಂದ ಆರೋಗ್ಯಕ್ಕೆ ಅನೇಕ ಲಾಭಗಳಿವೆ. ಜತೆಗೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.
ಎಣ್ಣೆ ಹಚ್ಚಿ ಸ್ನಾನ ಮಾಡುವುದರಿಂದ ಆರೋಗ್ಯಕ್ಕೆ ಅನೇಕ ಲಾಭಗಳಿವೆ. ನಿಮ್ಮ ದೇಹವು ಗಟ್ಟಿಯಾಗಿರುವುದರ ಜತೆಗೆ ಶಕ್ತಿ ಹೆಚ್ಚಿಸಿಕೊಳ್ಳಲು ಉತ್ತಮ ಮಾರ್ಗ. ಇದು ನಿಮ್ಮ ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ. ಜತೆಗೆ ಆಯಾಸವನ್ನು ಕಡಿಮೆ ಮಾಡುತ್ತದೆ. ನಿದ್ರಾಹೀನತೆ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಲು ನೆರವಾಗುತ್ತದೆ. ಹೀಗಿರುವಾಗ ಎಣ್ಣೆ ಹಚ್ಚಿ ಮಸಾಜ್ ಮಾಡಿದ ಬಳಿಕ ಸ್ನಾನ ಮಾಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಇದು ನಿಮ್ಮ ಆರೋಗ್ಯ ಸುಧಾರಣೆಗೆ ಸಹಾಯಕಾರಿ.
ಸ್ನಾನ ಮಾಡುವ ಮುನ್ನ ಉಗುರು ಬೆಚ್ಚಗಿನ ಎಣ್ಣೆಯನ್ನು ತೆಗೆದುಕೊಂಡು ದೇಹಕ್ಕೆ ಮಸಾಜ್ ಮಾಡಿ. ವಾರದಲ್ಲಿ ಮೂರು ಬಾರಿ ಈ ರೀತಿ ಮಾಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಇದರಿಂದ ದೇಹವು ವಿಶ್ರಾಂತಿ ಪಡೆಯುತ್ತದೆ. ಜತೆಗೆ ಆಯಾಸ, ಒತ್ತಡದಿಂದ ಪರಿಹಾರ ಕಂಡುಕೊಳ್ಳಬಹುದು.
ಉಪಯೋಗಗಳು
ರಕ್ತ ಪರಿಚಲನೆ ಸರಾಗವಾಗುತ್ತದೆ
ದೇಹದಿಂದ ಕಲ್ಮಶಗಳು ಹೊರಹೋಗುತ್ತವೆ
ಚರ್ಮದ ಕಾಂತಿ ಹೆಚ್ಚುತ್ತದೆ
ಗಟ್ಟಿ ಚರ್ಮವನ್ನು ಮೃದುವಾಗಿಸುತ್ತದೆ
ದೇಹವನ್ನು ಬಲಪಡಿಸುತ್ತದೆ
ಆಯಾಸ, ಒತ್ತಡದಿಂದ ಪರಿಹಾರ ಕಂಡುಕೊಳ್ಳಬಹುದು
ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಉಗುರು ಬೆಚ್ಚಗಿನ ಎಣ್ಣೆಯಲ್ಲಿ ಮಸಾಜ್ ಮಾಡಿ ಸ್ನಾನ ಮಾಡುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಬಹುದು. ಈ ರೀತಿ ಮಾಡುವುದರಿಂದ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಮತ್ತು ದೇಹವನ್ನು ಸದೃಢವಾಗಿರಿಸಿಕೊಳ್ಳಲು ಸಹಾಯಕವಾಗಿದೆ.