Publish Date: Thu, 25 Feb 2021 (08:47 IST)
Updated Date: Thu, 25 Feb 2021 (08:49 IST)
ಬೆಂಗಳೂರು : ಬೆಳ್ಳುಳ್ಳಿಯನ್ನು ಅಡುಗೆಗೆ ಬಳಸುತ್ತೇವೆ. ಆದರೆ ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಆದರೆ ಈ ಸಿಪ್ಪೆಯಿಂದ ಕೂದಲಿನ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಅದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ.
ಬೆಳ್ಳುಳ್ಳಿ ಸಿಪ್ಪೆಯನ್ನು ನೀರಿನಲ್ಲಿ ಕುದಿಸಿ ಅದನ್ನುಕೂದಲಿಗೆ ಹಚ್ಚಿದರೆ ಕೂದಲಿನ ಸಮಸ್ಯೆ ನಿವಾರಣೆಯಾಗುತ್ತದೆ. ಹಾಗೇ ಬೆಳ್ಳುಳ್ಳಿ ಸಿಪ್ಪೆಯನ್ನು ರುಬ್ಬಿ ಆಲಿವ ಆಯಿಲ್ ನೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಕೂದಲು ಹೊಳೆಯುತ್ತದೆ. ತಲೆಹೊಟ್ಟಿನ ಸಮಸ್ಯೆ ನಿವಾರಿಸಲು ಬೆಳುಳ್ಳಿ ಸಿಪ್ಪೆಯನ್ನು ಪುಡಿ ಮಾಡಿ ನಿಂಬೆ ರಸ ಬೆರೆಸಿಕೂದಲಿಗೆ ಹಚ್ಚಿ ಮಸಾಜ್ ಮಾಡಿ.