Publish Date: Wed, 15 May 2019 (07:02 IST)
Updated Date: Wed, 15 May 2019 (07:04 IST)
ಬೆಂಗಳೂರು : ಸಾಮಾನ್ಯವಾಗಿ ಹೆಚ್ಚಿನವರಿಗೆ ಎದೆನೋವು ಸಮಸ್ಯೆ ಕಾಣಿಸುತ್ತದೆ. ಈ ಎದೆನೋವು ಕಡಿಮೆಯಾಗಲು ಈ ಮನೆಮದ್ದನ್ನು ಬಳಸಿ.
ಕೊತ್ತಂಬರಿ ಸೊಪ್ಪನ್ನು ಎಳೆನೀರಿನೊಂದಿಗೆ ರುಬ್ಬಿ, ಕಲ್ಲುಸಕ್ಕರೆ, ಏಲಕ್ಕಿ ಪುಡಿ ಸೇರಿಸಿ ದಿನವೂ ಒಂದು ಭಾರಿ ಸೇವಿಸುತ್ತಿದ್ದರೆ ಎದೆನೋವು ಕಡಿಮೆ ಆಗುವುದು.
ಕೊತ್ತಂಬರಿ ಬೀಜವನ್ನು ಕುಟ್ಟಿ ಪುಡಿ ಮಾಡಿ ಅದನ್ನು ನೀರಿನಲ್ಲಿ ನೆನೆಹಾಕಬೇಕು. ಚೆನ್ನಾಗಿ ಕಿವಿಚಿ ಸೋಸಬೇಕು. ಈ ಕಷಾಯಕ್ಕೆ ಹಾಲು, ಸಕ್ಕರೆ ಬೆರೆಸಿ ಸೇವಿಸಿದರೆ ಆಗಾಗ ಕಾಡುವ ಎದೆ ನೋವು ಕಡಿಮೆಯಾಗುತ್ತದೆ.
ಎಳೆಯ ಸೀಬೆಕಾಯಿಯ ಎಲೆಯಿಂದ ಕಷಾಯವನ್ನು ಸಿದ್ಧಪಡಿಸಿ ಅದನ್ನು ಮಜ್ಜಿಗೆಯೊಂದಿಗೆ ಮಿಶ್ರಣ ಮಾಡಿ ಕುಡಿದರೆ ಎದೆ ನೋವು ತಕ್ಷಣ ಕಡಿಮೆಯಾಗುತ್ತದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.