Webdunia - Bharat's app for daily news and videos

Install App

ಈ ಕೆಲವು ಅಭ್ಯಾಸಗಳು ಮೂತ್ರಪಿಂಡಕ್ಕೆ ಹಾನಿಕಾರಕ!

Webdunia
ಸೋಮವಾರ, 11 ಅಕ್ಟೋಬರ್ 2021 (07:52 IST)
ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆದು ಹಾಕಲು ಮೂತ್ರಪಿಂಡ ಸಹಾಯಕ. ಇದಲ್ಲದೇ, ನೀರು, ಉಪ್ಪು, ಖನಿಜಾಂಶಗಳನ್ನು ಸಮ ಪ್ರಮಾಣದಲ್ಲಿಡಲು ಸಹಾಯ ಮಾಡುತ್ತದೆ.

ಇಲ್ಲದೇ ಹೋದರೆ ದೇಹದಲ್ಲಿ ನರಗಳು, ಜೀವಕೋಶಗಳು ಮತ್ತು ಸ್ನಾಯುಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ದೇಹವನ್ನು ಆರೋಗ್ಯವಾಗಿರಿಸಲು ಮೂತ್ರಪಿಂಡ ಆರೋಗ್ಯವಾಗಿರುವುದು ಬಹಳ ಮುಖ್ಯ. ನಮ್ಮ ಕೆಲವು ಅಭ್ಯಾಸಗಳು ಮೂತ್ರಪಿಂಡದ ಆರೋಗ್ಯವನ್ನು ಹಾಳುಮಾಡಬಹುದು. ಹಾಗಾಗಿ ಆರೋಗ್ಯ ಸುಧಾರಣೆಗೆ ಮತ್ತು ಮೂತ್ರಪಿಂಡದ ಆರೋಗ್ಯಕ್ಕಾಗಿ ಈ ಕೆಲವು ವಿಷಯಗಳನ್ನು ನೆನಪಿನಲ್ಲಿಡಿ.
ನೋವು ನಿವಾರಕದ ಅತಿಯಾದ ಬಳಕೆ
ದೇಹದಲ್ಲಿ ಸ್ವಲ್ಪ ನೋವು ಕಾಣಿಸಿಕೊಂಡರೆ ಸಾಕು ಜನರು ನೋವು ನಿವಾರಕ ಮಾತ್ರೆಗಳನ್ನು ನುಂಗುತ್ತಾರೆ. ಈ ನೋವು ನಿವಾರಕಗಳನ್ನು ಅತಿಯಾಗಿ ಸೇವಿಸುವುದರಿಂದ ಇದು ಮೂತ್ರಪಿಂಡಕ್ಕೆ ಹಾನಿಯುಂಟು ಮಾಡುತ್ತದೆ. ಮುಖ್ಯವಾಗಿ ಗಮನಿಸುವುದೆಂದರೆ, ಈಗಾಗಲೇ ನೀವು ಮೂತ್ರಪಿಂಡದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೆ, ವೈದ್ಯರ ಸಲಹೆಯ ಮೇರೆಗೆ ಯಾವುದೇ ನೋವು ನಿವಾರಕ ಔಷಧಗಳನ್ನು ಪಡೆಯಿರಿ.
ಅತಿಯಾದ ಉಪ್ಪು ಬಳಕೆ

ನಿಮ್ಮ ಆಹಾರದಲ್ಲಿ ಅತಿಯಾದ ಉಪ್ಪು ಇದ್ದರೆ ಇದು ರಕ್ತದೊತ್ತಡ ಸಮಸ್ಯೆಯನ್ನು ಹೆಚ್ಚಿಸುತ್ತದೆ. ಆಹಾರದಲ್ಲಿ ಉಪ್ಪನ್ನು ನಿಯಮಿತವಾಗಿ ಬಳಸಿ. ಇದು ನಿಮ್ಮ ಆರೋಗ್ಯವನ್ನು ಸುಧಾರಿಸಲು ಸಹಾಯಕವಾಗುತ್ತದೆ ಮತ್ತು ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಲು ನೆರವಾಗುತ್ತದೆ.
ಸಾಕಷ್ಟು ನಿದ್ರೆ ಮಾಡದಿರುವುದು

ಉತ್ತಮ ಆರೋಗ್ಯಕ್ಕಾಗಿ ಒಳ್ಳೆಯ ನಿದ್ರೆ ಬಹಳ ಮುಖ್ಯ. ಮೂತ್ರಪಿಂಡವನ್ನು ಆರೋಗ್ಯವಾಗಿಡಲು ಸಾಕಷ್ಟು ನಿದ್ರೆ ಮಾಡಿ. ಉತ್ತಮ ನಿದ್ರೆಯಿಂದ ಅದೆಷ್ಟೋ ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು.
ಅಧಿಕ ಸಕ್ಕರೆಯ ಬಳಕೆ ಬೇಡ

ಅಧಿಕ ಪ್ರಮಾಣದಲ್ಲಿ ಸಕ್ಕರೆ ಪದಾರ್ಥಗಳನ್ನು ಸೇವಿಸುವುದರಿಂದ ಬೊಜ್ಜು ಹೆಚ್ಚುತ್ತದೆ. ಇದಲ್ಲದೇ ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಸಮಸ್ಯೆ ಹೆಚ್ಚಾಗಬಹುದು. ಹಾಗಾಗಿ ನಿಯಮಿತವಾಗಿ ಸಕ್ಕರೆ ಅಂಶವನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.
ಧೂಮಪಾನದಿಂದ ದೂರವಿರಿ

ಧೂಮಪಾನ ಮತ್ತು ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ. ಧೂಮಪಾನ ಮಾಡುವುದು ಮೂತ್ರಪಿಂಡದ ಆರೋಗ್ಯವನ್ನು ಹಾನಿಗೊಳಿಸುತ್ತದೆ. ಇದು ನಿಮ್ಮ ಆರೋಗ್ಯದ ಮೇಲೆ ಪರಿಣಾಮವನ್ನು ಬೀರುತ್ತದೆ. ಹಾಗಾಗಿ ಧೂಮಪಾನ ಮತ್ತು ಮದ್ಯಪಾನ ಸೇವನೆ ರೂಢಿಯಲ್ಲಿದ್ದರೆ ಇಂದಿನಿಂದಲೇ ಬಿಟ್ಟುಬಿಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments