Select Your Language

Notifications

webdunia
webdunia
webdunia
webdunia

ಸಿಹಿ ಗೆಣಸಿನ ಆರೋಗ್ಯಕರ ಲಾಭಗಳು

ಸಿಹಿ ಗೆಣಸಿನ ಆರೋಗ್ಯಕರ ಲಾಭಗಳು
ಬೆಂಗಳೂರು , ಮಂಗಳವಾರ, 4 ಸೆಪ್ಟಂಬರ್ 2018 (18:16 IST)
ಸಿಹಿ ಗೆಣಸು ರುಚಿಕರ ಮತ್ತು ಪುಷ್ಟಿದಾಯಕ ಆಹಾರವಾಗಿದೆ. ಇದು ದೇಹಕ್ಕೆ ಬೇಕಾದ ವಿಟಮಿನ್ ಬಿ6, ಕ್ಯಾಲ್ಸಿಯಂ, ಕಬ್ಬಿಣ, ಸೋಡಿಯಂ, ಝಿಂಕ್, ಮೆಗ್ನಿಶಿಯಂ ಮೊದಲಾದ ಅಂಶಗಳನ್ನು ಒದಗಿಸುತ್ತದೆ. ಅಲ್ಲದೇ ಇದರಲ್ಲಿ ಉತ್ತಮ ಪ್ರಮಾಣದ ನಾರಿನಂಶ, ವಿಟಮಿನ್ ಸಿ ಮತ್ತು ವಿಟಮಿನ್ ಎ ಸಹಾ ಇದ್ದು ಹಲವು ತೊಂದರೆಗಳಿಂದ ರಕ್ಷಣೆ ನೀಡುತ್ತದೆ.
* ಸಿಹಿಗೆಣಸುಗಳಲ್ಲಿ ಸ್ವಾಭಾವಿಕ ಸಕ್ಕರೆ ಅಂಶ ಇರುವುದರಿಂದ ಅದು ಮಧಮೇಹವನ್ನು ಕಡಿಮೆ ಮಾಡಿ, ಇನ್ಸುಲಿನ್ ಪ್ರಮಾಣವನ್ನು ಸ್ಥಿರವಾಗಿಡುತ್ತದೆ ಮತ್ತು ರಕ್ತದಲ್ಲಿ ಸಕ್ಕರೆ ಮಟ್ಟವನ್ನು ಕಾಯ್ದುಕೊಳ್ಳುತ್ತದೆ.
 
* ಬಸಿರಾದ ಹೆಂಗಸರಿಗೆ ಬಹಳ ಆವಶ್ಯಕವಾದ ಬಿ-ವಿಟಾಮಿನ್ ಸೇರಿದಂತೆ ಪೋಲಿಕ್ ಆಸಿಡ್ ಮರಗೆಣಸಿನಲ್ಲಿ ಹೇರಳವಾಗಿದೆ.
 
* ಇದರಲ್ಲಿ ಅಧಿಕ ವಿಟಮಿನ್ ಎ, ಲೈಕೊಪೆನೆ ಇದ್ದು ಹೃದಯದ ಸ್ವಾಸ್ಥ್ಯವನ್ನು ಹೆಚ್ಚಿಸುತ್ತದೆ.
 
* ಸಿಹಿ ಗೆಣಸಿನಲ್ಲಿ ವಿಟಾಮಿನ್‌, ಮಿನರಲ್ಸ್‌, ಪ್ರೊಟೀನ್‌ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಆರೋಗ್ಯಕರವಾಗಿ ತೂಕ ಹೆಚ್ಚುತ್ತದೆ.
 
* ಇದರ ಸೇವನೆಯಿಂದ ಇಮ್ಯೂನಿಟಿ ಬೂಸ್ಟ್ ಆಗುತ್ತದೆ.
 
* ಇದು ಅಸ್ಥಮಾ ಸಮಸ್ಯೆ ನಿವಾರಣೆಯಾಗುತ್ತದೆ.
 
* ಇದರ ಸೇವನೆಯಿಂದ ಮಲಬದ್ಧತೆ ನಿವಾರಣೆಯಾಗುತ್ತದೆ. 
 
* ಇದರಲ್ಲಿರುವ ವಿಟಮಿನ್ ಸಿ ಜೀವಸತ್ವವು ಮೂಳೆ ಮತ್ತು ಹಲ್ಲಿನ ರಚನೆ, ಜೀರ್ಣಕ್ರಿಯೆ ಮತ್ತು ರಕ್ತ ಕಣ ರಚನೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ.
 
* ಸಿಹಿ ಗೆಣಸಿನಲ್ಲಿರುವ ಬೀಟಾ-ಕೆರೊಟಿನ್ ಸ್ತನ ಮತ್ತು ಶ್ವಾಸಕೋಶದ ಕ್ಯಾನ್ಸರ್‌ನಿಂದ ನಮ್ಮನ್ನು ಕಾಪಾಡುತ್ತವೆ. 
 
* ಶೀತ ಮತ್ತು ಜ್ವರದ ಸೊಂಕು ಹರಡುವುದನ್ನು ತಡೆಗಟ್ಟುತ್ತದೆ.
 
* ಇದರಲ್ಲಿ ಫೊಲಿಕ್ ಆಸಿಡ್ ಅಧಿಕ ಪ್ರಮಾಣದಲ್ಲಿರುವುದರಿಂದ ಗರ್ಭಾವಧಿಯಲ್ಲಿ ಭ್ರೂಣದ ಕೋಶ ಮತ್ತು ಕೋಶಗಳ ಬೆಳವಣಿಗೆಗೆ ಸಹಕರಿಸುತ್ತದೆ.
 
* ಸಿಹಿ ಗೆಣಸಿನಲ್ಲಿ ನಮ್ಮ ದೇಹಕ್ಕೆ ಅತ್ಯಗತ್ಯವಾದ ಖನಿಜಾಂಶಗಳು ಇವೆ. ನಮ್ಮ ದೇಹದ ವಿವಿಧ ಭಾಗಗಳಿಗೆ ಆಮ್ಲಜನಕವನ್ನು ಸಾಗಿಸಲು ಜೀವಕೋಶದ ಸಾಮರ್ಥ್ಯವನ್ನು ಇದು ಹೆಚ್ಚಿಸುತ್ತದೆ.
 
* ಸಿಹಿ ಗೆಣಸಿನಲ್ಲಿ ಪೊಟ್ಯಾಸಿಯಮ್‌ ಉನ್ನತ ಮಟ್ಟದಲ್ಲಿರುತ್ತದೆ. ಇದು ಹೃದಯ ಬಡಿತವನ್ನು ನಿಯಂತ್ರಿಸುವಲ್ಲಿ ಸಹಾಯ ಮಾಡುತ್ತದೆ. ದೇಹದ ಸ್ನಾಯುಗಳು ಮತ್ತು ನರ ಕಾರ್ಯಗಳನ್ನು ಸುಲಭಗೊಳಿಸುತ್ತದೆ.
 
* ಮ್ಯಾಂಗನೀಸ್ ಮತ್ತು ಕಬ್ಬಿಣಾಂಶಗಳು ಸಿಹಿಗೆಣಸಿನಲ್ಲಿ ಅಧಿಕವಾಗಿರುತ್ತವೆ. ಇವು ಋತುಚಕ್ರ ಪೂರ್ವ ಸಮಸ್ಯೆಗಳನ್ನು ನಿವಾರಿಸುತ್ತವೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಸಿ ಬಿಸಿಯಾದ ರುಚಿಯಾದ ಟೊಮೆಟೊ ರಸಂ