ಮೊಡವೆ ಸಮಸ್ಯೆ ನಿವಾರಿಸಲು ಪುರುಷರು ಬಳಸಿ ಈ ಫೇಸ್ ಪ್ಯಾಕ್

Webdunia
ಶನಿವಾರ, 13 ಜುಲೈ 2019 (05:56 IST)
ಬೆಂಗಳೂರು : ಮಹಿಳೆಯರಿಗೆ ಮಾತ್ರವಲ್ಲ ಪುರುಷರಿಗೂ ಕೂಡ ಮೊಡವೆಗಳ ಸಮಸ್ಯೆ ಕಾಡುತ್ತದೆ. ಪರಿಸರ, ಜೀವನಶೈಲಿ, ತಲೆಹೊಟ್ಟು, ಮತ್ತು ಅನುವಂಶಿಕ ಕಾರಣಗಳಿಂದ ಮೊಡವೆ ಸಮಸ್ಯೆ ಉಂಟಾಗುತ್ತದೆ. ಆದಕಾರಣ ಪುರುಷರು ಈ ಮೊಡವೆಗಳ ಸಮಸ್ಯೆಯಿಂದ ಮುಕ್ತಿ ಹೊಂದಲು ಈ ಫೇಸ್ ಪ್ಯಾಕ್ ಗಳನ್ನು ಬಳಸಿ.




ಒಂದು ಸಣ್ಣ ಕಪ್ ನಲ್ಲಿ ಮೊಸರು ಮತ್ತು ಎರಡು ಚಮಚ ಕಡಲೆ ಹಿಟ್ಟು ಸೇರಿಸಿ ಹಾಗೂ ದಪ್ಪ ಹದದಲ್ಲಿ ಪೇಸ್ಟ್ ತಯಾರಿಸಿ. ಈ ಪ್ಯಾಕ್‌ನ್ನು ನಿಮ್ಮ ಮುಖದ ಮೇಲೆ ಸಮವಾಗಿ ಹಚ್ಚಿ ಮತ್ತು 30-45 ನಿಮಿಷಗಳ ಕಾಲ ಒಣಗಲು ಬಿಡಿ. ಇದು ಸಂಪೂರ್ಣವಾಗಿ ಒಣಗಿದ ನಂತರ, ನೀರನ್ನು ಹಾಕಿ ನಿಮ್ಮ ಮುಖದ ಮೇಲೆ ವೃತ್ತಾಕಾರದ ಚಲನೆಯಲ್ಲಿ ಮಸಾಜ್ ಮಾಡಿ. ನಂತರ ಚೆನ್ನಾಗಿ ಮುಖವನ್ನು ತೊಳೆದು ಉತ್ತಮ ಮಾಯಿಶ್ಚರೈಸರ್ ಅನ್ನು ನಿಮ್ಮ ಮುಖಕ್ಕೆ ಹಚ್ಚಿ.


ಸೌತೆಕಾಯಿಯನ್ನು ಪೇಸ್ಟ್ ಮಾಡಿ ಅದಕ್ಕೆ ಸ್ವಲ್ಪ ರೋಸ್ ವಾಟರ್ ಮತ್ತು 1 ಚಮಚ ಗ್ಲಿಸರಿನ್ ಹಾಕಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಬೇಕು. 20 ನಿಮಿಷದ ಬಳಿಕ ತಣ್ಣೀರಿನಿಂದ ಮುಖ ತೊಳೆದರೆ ಮುಖದ ಕಾಂತಿ ಹೆಚ್ಚುವುದು.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಮುಂದಿನ ಸುದ್ದಿ
Show comments