Select Your Language

Notifications

webdunia
webdunia
webdunia
webdunia

ಗರ್ಭಿಣಿ ಮಹಿಳೆಯರು ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ಸೇವಿಸಿದರೆ ಏನಾಗುತ್ತದೆ ಗೊತ್ತಾ?

ಗರ್ಭಿಣಿ ಮಹಿಳೆಯರು ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ಸೇವಿಸಿದರೆ ಏನಾಗುತ್ತದೆ ಗೊತ್ತಾ?
Bangalore , ಬುಧವಾರ, 8 ಫೆಬ್ರವರಿ 2017 (10:24 IST)
ಬೆಂಗಳೂರು: ಪ್ರಯಾಣ ಮಾಡುವಾಗ ಸಾಮಾನ್ಯವಾಗಿ ನಾವು ಪ್ಲಾಸ್ಟಿಕ್ ಬಾಟಲಿಗಳಲ್ಲಿ ನೀರು ತುಂಬಿಕೊಂಡು ಹೋಗುತ್ತೇವೆ. ಇಂತಹ ಪ್ಲಾಸ್ಟಿಕ್ ಬಾಟಲಿಗಳ ನೀರು ಗರ್ಭಿಣಿ ಮಹಿಳೆಯರು ಕುಡಿಯಲೇಬಾರದಂತೆ!

 
ಅದು ಹುಟ್ಟುವ ಮಗುವಿನ ಮೇಲೆ ಪರಿಣಾಮ ಬೀರುತ್ತದೆ ಎನ್ನುವುದು ಹೊಸ ಸಂಶೋಧನೆಯಿಂದ ತಿಳಿದುಬಂದಿದೆ. ಪ್ಲಾಸ್ಟಿಕ್ ಬಾಟಲಿಗಳಲ್ಲಿ ತುಂಬಿದ ನೀರು ಕುಡಿಯುವ ಗರ್ಭಿಣಿ ಮಹಿಳೆಯರು ಹೆರುವ ಮಕ್ಕಳು ಸ್ಥೂಲಕಾಯದವರಾಗಿರುತ್ತಾರೆ ಎಂದು ವಿಜ್ಞಾನಿಗಳು ಕಂಡುಕೊಂಡಿದ್ದಾರೆ.

ಪ್ಲಾಸ್ಟಿಕ್ ಬಾಟಲಿಗಳ ನೀರು ಕುಡಿಯುವುದರಿಂದ ಹಸಿವು ನಿಯಂತ್ರಿಸುವ ಹಾರ್ಮೋನ್ ನ ಮೇಲೆ ಪರಿಣಾಮ ಬೀರುತ್ತದೆ. ಪ್ಲಾಸ್ಟಿಕ್ ಬಾಟಲಿಗಳಲ್ಲಿರುವ ರಾಸಾಯನಿಕ ಇದಕ್ಕೆಲ್ಲಾ ಕಾರಣ ಎನ್ನುವುದು ವಿಜ್ಞಾನಿಗಳ ಅಭಿಪ್ರಾಯ.

ಹಿಂದೆಯೂ ಹಲವು ಬಳಸಿ ಬಿಸಾಕುವ ಪ್ಲಾಸ್ಟಿಕ್ ಬಾಟಲಿಗಳ ನೀರು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಸಂಶೋಧನೆಗಳು ಹೇಳಿದ್ದವು. ಆದರೆ ಇದು ಹುಟ್ಟುವ ಮಗುವಿನ ಮೇಲೂ ಪರಿಣಾಮ ಬೀರುತ್ತದೆ ಎಂದು ಹೊಸದಾಗಿ ಕಂಡುಕೊಳ್ಳಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಆಹಾ.. ನಯನ ಎಂಥಾ ಮನೋಹರ..!