Select Your Language

Notifications

webdunia
webdunia
webdunia
webdunia

ಮೊಟ್ಟೆ ತಿನ್ನುವುದರಿಂದ ಆಗುವ ಲಾಭವೇನು?

ಮೊಟ್ಟೆ ತಿನ್ನುವುದರಿಂದ ಆಗುವ ಲಾಭವೇನು?
ಬೆಂಗಳೂರು , ಮಂಗಳವಾರ, 19 ಜೂನ್ 2018 (15:29 IST)
ಮೊಟ್ಟೆಯು ಹೇರಳವಾದ ಪ್ರೋಟಿನ್ ಮತ್ತು ಪೌಷ್ಟಿಕಾಂಶಗಳನ್ನು ಒಳಗೊಂಡಿರುತ್ತದೆ. ಇನ್ನು ಪ್ರತಿ ಮೊಟ್ಟೆಯಲ್ಲಿ ಶೇ.6 ರಷ್ಟು ವಿಟಮಿನ್ ಎ, ವಿಟಮಿನ್ ಬಿ5 ಶೇ,7. ವಿಟಮಿನ್ ಬಿ12, ಶೇ15 ಹಾಗೂ ಪ್ರಾಸ್ಪರಸ್ ಶೇ9 ರಷ್ಟು ಇರುತ್ತದೆ. ಜೊತೆಗೆ ವಿಟಮಿನಿ ಇ.  ಪಾಲಿಕ್ ಆಸಿಡ್, ಒಮೆಗಾ 3 ಸೇರಿದಂತೆ ಹಲವು ಅಂಶಗಳು ಮೊಟ್ಟೆಯಲ್ಲಿವೆ. ಹೀಗಾಗಿ ಮೊಟ್ಟೆ ಒಂದು ಪೂರ್ಣ ಪ್ರಮಾಣದ ಆಹಾರವಾಗಿದೆ.
* ಮೊಟ್ಟೆಯು ಚಯಾಪಚಯಾ ಕ್ರಿಯೆಯನ್ನು ಉತ್ತಮಪಡಿಸುತ್ತದೆ. 
 
*ಮೊಟ್ಟೆಯಲ್ಲಿ ಕೆಲವೊಂದು ಪೋಷಕಾಂಶಗಳನ್ನು ಕರಗಿಸಲು ನಿಮ್ಮ ದೇಹಕ್ಕೆ ಹೆಚ್ಚಿನ ಶಕ್ತಿ ಬೇಕಾಗುತ್ತದೆ. ಇದರಿಂದ ದೇಹದ ಬೊಜ್ಜು ಕರಗುತ್ತದೆ.
 
* ಮೊಟ್ಟೆಯನ್ನು ಬೇಯಿಸಿ ಅದರ ಬಿಳಿ ಭಾಗವನ್ನು ಮಾತ್ರ ತಿಂದರೆ ಆರೋಗ್ಯಕರವಾಗಿ ತೆಳ್ಳಗಾಗುವಿರಿ.
 
* ಬೇಯಿಸಿದ ಮೊಟ್ಟೆಯಿಂದ ಕಣ್ಣುಗಳಿಗೆ ಅತ್ಯುತ್ತಮ ಪ್ರಯೋಜನ ಲಭಿಸುತ್ತದೆ.
 
* ಬೆಳಗ್ಗೆ ಒಂದು ಮೊಟ್ಟೆ ತಿಂದರೆ ಇದು ಶಕ್ತಿವರ್ಧಕವಾಗಿ ಕೆಲಸ ಮಾಡುತ್ತದೆ. 
 
* ಪ್ರತಿ ನಿತ್ಯ ಒಂದು ಮೊಟ್ಟೆ ತಿಂದರೆ ಮಾಂಸಖಂಡಗಳು ಬಲವಾಗುತ್ತವೆ. ಮೊಟ್ಟೆ ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ.
 
* ಮೊಟ್ಟೆಯಲ್ಲಿ ವಿಟಮಿನ್ ಬಿ12 ಹೇರಳವಾಗಿರುವುದರಿಂದ ದೇಹಕ್ಕೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
 
* ಗರ್ಭಿಣಿಯರು ಮೊಟ್ಟೆ ತಿನ್ನುವುದರಿಂದ ಗರ್ಭದಲ್ಲಿರುವ ಶಿಶುವಿಗೆ ಪೋಷಕಾಂಶ ಹಾಗೂ ಖನಿಜಾಂಶ ಪೂರೈಕೆಯಾಗಿ ಆರೋಗ್ಯಯುತವಾಗಿ ಬೆಳೆಯಲು ಸಹಾಯವಾಗುತ್ತದೆ.
 
* ತೀವ್ರ ನಿಶಕ್ತತೆಯಿಂದ ಬಳಲುತ್ತಿರುವವರು ಪ್ರತಿನಿತ್ಯ ಮೊಟ್ಟೆ ತಿನ್ನುವುದರಿಂದ ಸದೃಢರಾಗಿ ಆರೋಗ್ಯಯುತ ದೇಹ ಹೊಂದಬಹುದು.
 
* ಮೊಟ್ಟೆಯಲ್ಲಿ ಅಗತ್ಯವಾಗಿರುವ ವಿಟಮಿನ್ ಹಾಗೂ ಮಿನರಲ್ಸ್ ಇರುವುದರಿಂದ ಮಿದುಳು ಬೆಳೆಯಲು ಸಹಕರಿಸಿ ಬುದ್ದಿವಂತರನ್ನಾಗಿಸುತ್ತದೆ.
 
* ಪ್ರತಿದಿನ ಒಂದು ಮೊಟ್ಟೆ ತಿನ್ನುವುದರಿಂದ ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ.
 
* ಪ್ರತಿದಿನ ಒಂದು ಮೊಟ್ಟೆ ತಿನ್ನುವುದರಿಂದ ಹೃದಯದ ಸ್ವಾಸ್ಥ್ಯ ಹೆಚ್ಚುತ್ತದೆ.
 
* ವಾರಕ್ಕೊಮ್ಮೆ ಮೊಟ್ಟೆಯ ಬಿಳಿ ಭಾಗವನ್ನು ಕೂದಲಿಗೆ ಹಚ್ಚುವುದರಿಂದ ಕೂದಲು ಮಂದವಾಗಿ ಆಕರ್ಷಕವಾಗಿ ಕಾಣುತ್ತದೆ.
 
* ಬೇಯಿಸಿದ ಮೊಟ್ಟೆಯಲ್ಲಿರುವ ವಿಟಮಿನ್ ಡಿ ಹಾಗೂ ಇತರ ಖನಿಜಗಳು ಮತ್ತು ಆಂಟಿ ಆಕ್ಸಿಡೆಂಟುಗಳು ಉಗುರುಗಳ ಉತ್ತಮ ಬೆಳವಣಿಗೆ ಹಾಗೂ ಆರೋಗ್ಯಕರವಾಗಿರಲು ನೆರವಾಗುತ್ತವೆ.
 
* ಬೆಳಗ್ಗೆ ಒಂದು ಅಥವಾ ಎರಡು ಮೊಟ್ಟೆಯ ಬಿಳಿಭಾಗವನ್ನು ತಿಂದರೆ ಅದು ದಿನಪೂರ್ತಿ ಚಟುವಟಿಕೆಯಿಂದ ಕೆಲಸ ಮಾಡಲು ದೇಹಕ್ಕೆ ಚೈತನ್ಯ ತುಂಬುತ್ತದೆ.
 
* ಹೆಚ್ಚು ಹೊತ್ತು ಬೇಯಿಸಿದ ಮೊಟ್ಟೆಯನ್ನು ಸೇವಿಸುವ ಮೂಲಕ ರಕ್ತ ಹೆಪ್ಪುಗಟ್ಟುವುದನ್ನು ತಡೆಯಬಹುದು.
 
* ವಾರಕ್ಕೊಂದಾದರೂ ಬೇಯಿಸಿದ ಮೊಟ್ಟೆಯನ್ನು ಸೇವಿಸುವ ಮೂಲಕ ಸ್ತನ ಕ್ಯಾನ್ಸರ್ ಆವರಿಸುವ ಸಾಧ್ಯತೆ ಅಪಾರವಾಗಿ ಕಡಿಮೆಯಾಗಿಸಬಹುದು. 
 
* ಮೊಟ್ಟೆಯ ಬಿಳಿಯನ್ನು ಮುಖಕ್ಕೆ ಲೇಪಿಸಿ, ಒಣಗಿದ ನಂತರ ತಂಪಾದ ನೀರಿನಿಂದ ತೊಳೆದರೆ, ಮುಖದ ಮೇಲಿನ ಕಲೆಗಳು, ನೆರಿಗೆಗಳು ಕಡಿಮೆಯಾಗುತ್ತವೆ.

Share this Story:

Follow Webdunia kannada

ಮುಂದಿನ ಸುದ್ದಿ

ತೊಂಡೆಕಾಯಿ ತಿನ್ನುವುದರಿಂದ ಆಗುವ ಲಾಭವೇನು?