Select Your Language

Notifications

webdunia
webdunia
webdunia
Saturday, 5 April 2025
webdunia

ದಕ್ಷಿಣ ಭಾರತದಲ್ಲಿ ಅತಿಹೆಚ್ಚು ಇನ್ಸ್ಟಾಗ್ರಾಮ್ ಫಾಲೋವರ್ಸ್ ಹೊಂದಿರುವ ನಟ ಅಲ್ಲು ಅರ್ಜುನ್

ಸಿನಿಮಾ
ಬೆಂಗಳೂರು , ಮಂಗಳವಾರ, 31 ಆಗಸ್ಟ್ 2021 (12:37 IST)
ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಗೆ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ 13 ಮಿಲಿಯನ್ ಅನುಯಾಯಿಗಳಿದ್ದಾರೆ. ದಕ್ಷಿಣ ಭಾರತದಲ್ಲೇ ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ನಟ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಎಲ್ಲಾ ರೀತಿಯ ಪಾತ್ರಗಳಿಗೂ ಜೀವ ತುಂಬುವ ಟಾಲಿವುಡ್ ನ ಪ್ರತಿಭಾವಂತ ನಟರಾಗಿದ್ದಾರೆ.

ಅಲ್ಲು ಅರ್ಜುನ್ ಅವರಿಗೆ ಬೇರೆ ಬೇರೆ ರಾಜ್ಯಗಳಲ್ಲೂ ಸಾಕಷ್ಟು ಅಭಿಮಾನಿಗಳಿದ್ದಾರೆ. ಕರ್ನಾಟಕದಲ್ಲಿ ಕೂಡ ಅಲ್ಲು ಅರ್ಜುನ್ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಅಲ್ಲು ಅರ್ಜುನ್ ಹೊರತುಪಡಿಸಿ ದಕ್ಷಿಣ ಭಾರತದ ಮತ್ತೊಬ್ಬ ನಟ ವಿಜಯ್ ದೇವರಕೊಂಡ ಇನ್ಸ್ಟಾಗ್ರಾಮ್ ನಲ್ಲಿ 12.9 ಮಿಲಿಯನ್ ಫಾಲೋವರ್ಸ್ ಹೊಂದಿದ್ದು ಎರಡನೇ ಸ್ಥಾನ ಕಾಯ್ದುಕೊಂಡಿದ್ದಾರೆ.
ಅಲ್ಲು ಅರ್ಜುನ್ ನಟನೆಯ 'ಪುಷ್ಪ' ಚಿತ್ರ ಕ್ರಿಸ್ಮಸ್ ಹಬ್ಬದಂದು ತೆರೆ ಮೇಲೆ ಅಬ್ಬರಿಸಲು ಸಜ್ಜಾಗಿದೆ. ಸುಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬರ್ತ್ ಡೇ ದಿನ ಅಭಿಮಾನಿಗಳೊಂದಿಗೆ ಕಿಚ್ಚ ಸುದೀಪ್ ಲೈವ್