Publish Date: Mon, 01 Nov 2021 (09:46 IST)
Updated Date: Mon, 01 Nov 2021 (09:49 IST)
ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ದಕ್ಷಿಣ ಸೂಪರ್ ಸ್ಟಾರ್ ರಜನಿಕಾಂತ್ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇದೇ ಅಕ್ಟೋಬರ್ 28ರಂದು ನಿಯಮಿತ ಆರೋಗ್ಯ ತಪಾಸಣೆಗಾಗಿ ರಜನಿಕಾಂತ್ ಆಸ್ಪತ್ರೆಗೆ ದಾಖಲಾಗಿದ್ದರು. ರಜನಿಗೆ ಎದೆಯ ಭಾಗದಲ್ಲಿ ನೋವು ಮತ್ತು ಸುಸ್ತು ಕಾಣಿಸಿಕೊಂಡಿತ್ತು, ಹೀಗಾಗಿ ಅವರನ್ನು ಮುಂಜಾಗ್ರತಾ ಕ್ರಮವಾಗಿ ಕಾವೇರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮೂರು ದಿನಗಳ ಕಾಲ ಚಿಕಿತ್ಸೆ ಪಡೆದ ನಟ ರಜನಿ ಕಾಂತ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಸದ್ಯ ಡಿಸ್ಚಾರ್ಜ್ ಆಗಿ ಮನೆಗೆ ಹಿಂದಿರುಗಿದ್ದಾರೆ..