Webdunia - Bharat's app for daily news and videos

Install App

ಖ್ಯಾತ ನಟನಿಗೆ ಇದೆಂಥಾ ಗತಿ?

Webdunia
ಸೋಮವಾರ, 15 ನವೆಂಬರ್ 2021 (20:18 IST)
ತಮಿಳಿನ ಖ್ಯಾತ ಹಾಸ್ಯ ನಟ ‘ಪವರ್ಸ್ಟಾರ್’ ಶ್ರೀನಿವಾಸನ್ ಅವರು ಆಸ್ಪತ್ರೆಗೆ ದಾಖಲಾಗಿ ಕೆಲ ತಿಂಗಳು ಕಳೆದಿದೆ.
ಇತ್ತೀಚೆಗೆ ಅವರಿಗೆ ಆರೋಗ್ಯ ತುಂಬಾನೇ ಕೈಕೊಟ್ಟಿದೆ. 2010ರಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿರುವ ಶ್ರೀನಿವಾಸನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ದೇಹ ಸಂಪೂರ್ಣ ಕುಗ್ಗಿ ಹೋಗಿದೆ. ಮತ್ತೊಬ್ಬರ ಸಹಾಯವಿಲ್ಲದೆ ಒಂದು ಕಡೆಯಿಂದ ಮತ್ತೊಂದು ಕಡೆಗೆ ತೆರಳಲೂ ಆಗದೆ ಇರುವ ಪರಿಸ್ಥಿತಿಗೆ ಬಂದು ನಿಂತಿದ್ದಾರೆ. ಈ ವಿಡಿಯೋಗಳು ಈಗ ವೈರಲ್ ಆಗಿದೆ. ಈ ಬಗ್ಗೆ ಕುಟುಂಬದವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಈ ವಿಡಿಯೋ ನೋಡಿದ ಅಭಿಮಾನಿಗಳು ತುಂಬಾನೇ ಬೇಸರಗೊಂಡಿದ್ದಾರೆ. ಇನ್ನೂ ಕೆಲವರು ಕಣ್ಣೀರು ಹಾಕಿದ್ದಾರೆ. ನಟನ ಈ ಸ್ಥಿತಿ ನೋಡಿ ಕೆಲವರು ಸಹಾಯಕ್ಕೂ ಮುಂದೆ ಬಂದಿದ್ದಾರೆ.
ಕೆಲ ತಿಂಗಳ ಹಿಂದೆ ಶ್ರೀನಿವಾಸನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ರಕ್ತದ ಒತ್ತಡದಲ್ಲಿ ಏರುಪೇರಾಗಿದ್ದು ಇದಕ್ಕೆ ಪ್ರಮುಖ ಕಾರಣವಾಗಿತ್ತು. ಇಷ್ಟೇ ಆಗಿದ್ದರೆ ಅವರು ಆಸ್ಪತ್ರೆಯಿಂದ ಬಿಡುಗಡೆ ಹೊಂದಬೇಕಿತ್ತು. ಆದರೆ, ಅವರಿಗೆ ನಿಜಕ್ಕೂ ಆಗಿದ್ದೇನು ಎನ್ನುವ ವಿಚಾರವನ್ನು ಯಾರೂ ಬಿಟ್ಟುಕೊಟ್ಟಿಲ್ಲ. ಈ ಬಗ್ಗೆ ಆಸ್ಪತ್ರೆಯವರು ಕೂಡ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ಇದು ಫ್ಯಾನ್ಸ್ ಆತಂಕಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ ಅವರ ವಿಡಿಯೋ ವೈರಲ್ ಆಗಿದ್ದು ನೋಡಿ ಫ್ಯಾನ್ಸ್ ನೊಂದುಕೊಂಡಿದ್ದಾರೆ. ಈ ಬಗ್ಗೆ ಕುಟುಂಬದವರು ಯಾವ ರೀತಿಯ ಅಪ್ಡೇಟ್ ನೀಡುತ್ತಾರೆ ಎಂದು ಕಾದು ಕೂತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments