ಒಂದೇ ದಿನಕ್ಕೆ ನಂ.1 ಪಟ್ಟ ಕಳೆದುಕೊಂಡ ಟೀಂ ಇಂಡಿಯಾ

ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧ ನಾಲ್ಕನೇ ಏಕದಿನ ಪಂದ್ಯ ಸೋತ ಟೀಂ ಇಂಡಿಯಾ ಅದಕ್ಕೆ ತಕ್ಕ ಬೆಲೆ ತೆತ್ತಿದೆ. ಸೋತ ತಪ್ಪಿಗೆ ಒಂದೇ ದಿನದ ಅಂತರದಲ್ಲಿ ನಂ.1 ಪಟ್ಟ ಕಳೆದುಕೊಂಡಿದೆ.


ಮೂರನೇ ಏಕದಿನ ಪಂದ್ಯ ಗೆದ್ದು, ಸರಣಿಯನ್ನೂ ತನ್ನದಾಗಿಸಿಕೊಂಡಿದ್ದ ಟೀಂ ಇಂಡಿಯಾ ಏಕದಿನ ಮಾದರಿಯಲ್ಲಿ ನಂ.1 ಸ್ಥಾನಕ್ಕೇರಿತ್ತು. ಇದರೊಂದಿಗೆ ಟೆಸ್ಟ್ ಮತ್ತು ಏಕದಿನದಲ್ಲಿ ಏಕಕಾಲಕ್ಕೆ ನಂ.1 ಪಟ್ಟ ಅಲಂಕರಿಸಿದ ಗೌರವಕ್ಕೆ ಪಾತ್ರವಾಗಿತ್ತು.

ಆದರೆ ಬೆಂಗಳೂರು ಪಂದ್ಯವನ್ನು ಸೋತ ಮೇಲೆ ಮತ್ತೆ ಟೀಂ ಇಂಡಿಯಾ ದ್ವಿತೀಯ ಸ್ಥಾನಕ್ಕೆ ಕುಸಿದಿದೆ. ಮತ್ತೆ ದ. ಆಫ್ರಿಕಾ ಕೂದಲೆಳೆಯ ಅಂತರದಲ್ಲಿ ನಂ.1 ಸ್ಥಾನಕ್ಕೇರಿದೆ. ಹಾಗಿದ್ದರೂ ಆಸ್ಟ್ರೇಲಿಯಾ ವಿರುದ್ಧ ಇನ್ನೂ ಒಂದು ಪಂದ್ಯ ಬಾಕಿಯಿದ್ದು, ಅದನ್ನು ಗೆದ್ದರೆ ಮತ್ತೆ ನಂ.1 ಸ್ಥಾನ ದೊರಕಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ನಾಲ್ಕನೇ ಏಕದಿನ ಪಂದ್ಯಕ್ಕೂ ಮೊದಲು ಬಿಸಿಸಿಐ ಎಡವಟ್ಟು