Webdunia - Bharat's app for daily news and videos

Install App

ತಾಲಿಬಾನ್ ದಾಳಿ-ಬಾಲಕಿ ಮಲಾಲಾ ಬ್ರಿಟನ್ ಆಸ್ಪತ್ರೆಗೆ

Webdunia
ಮಂಗಳವಾರ, 16 ಅಕ್ಟೋಬರ್ 2012 (10:21 IST)
PTI
ತಾಲಿಬಾನ್ ಉಗ್ರರು ನಡೆಸಿದ ದಾಳಿಯಲ್ಲಿ ಗಾಯಗೊಂಡು ಪಾಕಿಸ್ತಾನದ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ 14 ವರ್ಷದ ಶಾಲಾ ಬಾಲಕಿ ಮಲಾಲಾ ಯೂಸುಫ್‌ಜೈಯನ್ನು ಚಿಕಿತ್ಸೆಗಾಗಿ ಸೋಮವಾರ ಬ್ರಿಟನ್‌ಗೆ ಕೊಂಡೊಯ್ಯಲಾಯಿತು.

ಹದಿಹರೆಯದ ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕಿಗಾಗಿ ಹೋರಾಟ ನಡೆಸುತ್ತಿರುವ ಈ ಬಾಲಕಿ ತಲೆಗೆ ತಾಲಿಬಾನ್ ಉಗ್ರರು ಗುಂಡು ಹೊಡೆದಿದ್ದರು. ನಂತರ ಈಕೆಯನ್ನು ಪಾಕಿಸ್ತಾನದ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಬ್ರಿಟನ್ ಸರ್ಕಾರವು ಉನ್ನತ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ತಿಳಿಸಿದ್ದರಿಂದ ಬ್ರಿಟನ್‌ಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಯ ಖರ್ಚನ್ನು ಸರ್ಕಾರವೇ ಭರಿಸಲಿದೆ ಎಂದು ಪಾಕ್ ತಿಳಿಸಿದೆ.

ತಾಲಿಬಾನ್ ಉಗ್ರರು ಮತ್ತೆ ದಾಳಿ ನಡೆಸುವ ಬೆದರಿಕೆ ಹಾಕಿದ್ದ ಕಾರಣ ಆಕೆಯನ್ನು ಬ್ರಿಟನ್‌ಗೆ ಸಾಗಿಸುವ ವಿಷಯ ರಹಸ್ಯವಾಗಿ ಇಡಲಾಗಿತ್ತ ು` ಎಂದು ಪಾಕ್ ಭದ್ರತಾ ಸಚಿವ ರೆಹಮಾನ್ ಮಲಿಕ್ ತಿಳಿಸಿದ್ದಾರೆ. ಭಯೋತ್ಪಾದನೆ ವಿರುದ್ಧ ಹೋರಾಟ ನಡೆಸುತ್ತಿರುವ ಪಾಕಿಸ್ತಾನಕ್ಕೆ ನಮ್ಮ ಸರ್ಕಾರ ಸಹಕಾರ ನೀಡಲಿದೆ ಎಂದು ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ವಿಲಿಯಂ ಹೇಗ್ ತಿಳಿಸಿದ್ದಾರೆ.

ಪತ್ರಕರ್ತರಿಗೆ ಭದ್ರತೆ
ತಾಲಿಬಾನ್ ಉಗ್ರರ ದಾಳಿ ಬೆದರಿಕೆ ಹಿನ್ನೆಲೆಯಲ್ಲಿ ಪಾಕಿಸ್ತಾನದ ಮಾಧ್ಯಮ ಸಂಸ್ಥೆಗಳು ಮತ್ತು ಕೆಲ ಪ್ರಮುಖ ಟಿ.ವಿ. ಚಾನೆಲ್‌ಗಳ ನಿರೂಪಕರಿಗೆ ಭದ್ರತೆ ಒದಗಿಸಲಾಗಿದೆ ಎಂದು ಸಚಿವ ಮಲಿಕ್ ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments