Webdunia - Bharat's app for daily news and videos

Install App

ಪಾಕ್ ಚುನಾವಣೆಗೆ ಸ್ಪರ್ಧಿಸದಿರಲು ಹೀನಾ ರಬ್ಬಾನಿ ನಿರ್ಧಾರ

Webdunia
ಸೋಮವಾರ, 8 ಏಪ್ರಿಲ್ 2013 (11:34 IST)
PR
PR
ಪಾಕಿಸ್ತಾನ ಮಾಜಿ ವಿದೇಶಾಂಗ ಸಚಿವೆ ಹೀನಾ ರಬ್ಬಾನಿ ಖಾರ್ ಮುಂದಿನ ತಿಂಗಳು ನಡೆಯಲಿರುವ ಸಂಸದೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸಾಹ ತೋರುತ್ತಿಲ್ಲ ಹಾಗೂ ಅವರ ತಂದೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪಂಜಾಬ್ ಪ್ರಾಂತ್ಯದ ವಿಧಾನಸಭಾ ಕ್ಷೇತ್ರದ ಸಂಖ್ಯೆ 177ರಲ್ಲಿ ಹೀನಾ ತಂದೆ ಗುಲಾಂ ರಬ್ಬಾನಿ ಖಾರ್ ಸ್ಪರ್ಧಿಸಲು ಅನುಮತಿ ದೊರೆತಿದ್ದು, ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಪಾಕಿಸ್ತಾನ ಪೀಪಲ್ಸ್ ಪಾರ್ಟಿಯಿಂದ ಕಳೆದ ಬಾರಿ ಪ್ರತಿನಿಧಿಸಿದ್ದ ಮಹಿಳಾ ಮೀಸಲು ಕ್ಷೇತ್ರದಿಂದಲೂ ಹೀನಾ ಸ್ಪರ್ಧಿಸುವುದಿಲ್ಲ. ಬದಲಾಗಿ ಅವರ ತಂದೆ ಪರ ಪ್ರಚಾರ ನಡೆಸುವರು ಎಂದು ಪತ್ರಿಕೆಯೊಂದು ವರದಿ ಮಾಡಿದೆ.

ಗುಲಾಂ ಅವರು ಅಗತ್ಯ ವಿದ್ಯಾರ್ಹತೆಯನ್ನು ಹೊಂದಿಲ್ಲ ಎನ್ನುವ ಕಾರಣಕ್ಕೆ 2008ರ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವನ್ನು ನಿರಾಕರಿಸಲಾಗಿತ್ತು. ಹೊಸ ಚುನಾವಣಾ ನಿಯಮದ ಪ್ರಕಾರ ಪಾಕ್‌ನಲ್ಲಿ ಅಭ್ಯರ್ಥಿಯು ಪದವಿಯನ್ನು ಹೊಂದಿರುವುದು ಕಡ್ಡಾಯ. 34ನೆ ವಯಸ್ಸಿಗೆ ವಿದೇಶಾಂಗ ಸಚಿವ ಖಾತೆಯನ್ನು ನಿರ್ವಹಿಸಿದ ಹೀನಾ ಕಿರಿಯ ವಯಸ್ಸಿನ ಮಹಿಳಾ ಸಚಿವೆಯಾಗಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments