Webdunia - Bharat's app for daily news and videos

Install App

ಮದುವೆಯಿಂದ ಹಿಂದಿರುಗುತ್ತಿದ್ದ 103 ಮಂದಿ ದುರ್ಮರಣ !

Webdunia
ಗುರುವಾರ, 15 ಜೂನ್ 2023 (10:28 IST)
ನೈಜೀರಿಯಾ : ಮದುವೆಯಿಂದ ಹಿಂದಿರುಗುತ್ತಿದ್ದಾಗ ದೋಣಿ ಮಗುಚಿ, ಮಕ್ಕಳು ಸೇರಿದಂತೆ ಕನಿಷ್ಠ 103 ಜನರು ಸಾವನ್ನಪ್ಪಿದ ಘಟನೆ ಎಂದು ಉತ್ತರ ನೈಜೀರಿಯಾದಲ್ಲಿ ನಡೆದಿದೆ.
 
ರಾಜ್ಯದ ರಾಜಧಾನಿ ಇಲೋರಿನ್ನಿಂದ 160 ಕಿಲೋಮೀಟರ್ ದೂರದಲ್ಲಿರುವ ಕ್ವಾರಾ ರಾಜ್ಯದ ಪಟೇಗಿ ಜಿಲ್ಲೆಯ ನೈಜರ್ ನದಿಯಲ್ಲಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಹಲವು ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ತೀವ್ರ ಶೋಧ ಕಾರ್ಯ ನಡೆದಿದೆ. ಇದುವರೆಗೆ 100 ಜನರನ್ನು ರಕ್ಷಿಸಲಾಗಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.

ನೀರಿನಲ್ಲಿ ಮುಳುಗಿದವರಲ್ಲಿ ಹೆಚ್ಚಿನವರು ಸಂಬಂಧಿಕರಾಗಿದ್ದು, ಅವರು ಮದುವೆಗೆ ಬಂದಿದ್ದರು. ತಡರಾತ್ರಿಯವರೆಗೂ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು ಎಂದು ಸ್ಥಳೀಯ ಮುಖ್ಯಸ್ಥ ಅಬ್ದುಲ್ ಗಣ ಲುಕ್ಪಾಡಾ ಹೇಳಿದ್ದಾರೆ. 

ಬೈಕ್ ನಲ್ಲಿ ಸಮಾರಂಭಕ್ಕೆ ಆಗಮಿಸಿದ ಅವರು, ಮಳೆಯಿಂದಾಗಿ ರಸ್ತೆಯಲ್ಲಿ ನೀರು ತುಂಬಿದ ಪರಿಣಾಮ ಬೋಟ್ ನಲ್ಲಿ ತೆರಳಬೇಕಾಯಿತು. ದೋಣಿಯಲ್ಲಿ ಸುಮಾರು 300 ಜನ ಇದ್ದರು, ಹೀಗಾಗಿ ಬೋಟ್ ಓವರ್ ಲೋಡ್ ಆಗಿತ್ತು. ದೋಣಿ ಚಲಿಸುತ್ತಿದ್ದಾಗ ಒಂದು ದೊಡ್ಡ ಮರದ ದಿಮ್ಮಿಗೆ ಬಡಿದು ಎರಡು ಭಾಗವಾಗಿ ದುರ್ಘಟನೆ ಸಂಭವಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments