ಪ್ರವಾಸಿಗರಿಂದ ತುಂಬಿ ತುಳುಕುವ ಮ್ಯಾನ್‌ಹಟನ್‌ನಲ್ಲಿ ನಡೆದ ಸ್ಫೋಟ ಉದ್ದೇಶಪೂರ್ವಕ ಕೃತ್ಯವಾಗಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಗೆ ವಿಶ್ವದ ನಾಯಕರು ಬರಲಿರುವ ಹಿನ್ನೆಲೆಯಲ್ಲಿ ಇಂತಹ ಸಂಚು ರೂಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಜೆರ್ಸಿಯಲ್ಲಿ ಕಸದ ತೊಟ್ಟಿಯಲ್ಲಿದ್ದ ಪೈಪ್ ಬಾಂಬ್ ಸ್ಫೋಟಗೊಂಡ ನಂತರ, ಇನ್ನುಳಿದ ಸಜೀವ ಬಾಂಬ್‌ಗಳನ್ನು ಪೊಲೀಸರು ನಿಷ್ಕ್ರೀಯಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರೆಸಿಡೆನ್ಶಿಯಲ್ ಮತ್ತು ಕಮರ್ಷಿಯಲ್ ಪ್ರದೇಶದಲ್ಲಿ ಪ್ರವಾಸಿಗರು ಮತ್ತು ಸ್ಥಳೀಯರಿಂದ ತುಂಬಿ ತುಳುಕುವುದನ್ನು ಕಂಡ ಆರೋಪಿಗಳು ಬಾಂಬ್ ಸ್ಫೋಟ ನಡೆಸಿದ್ದಾರೆ. ಘಟನೆಯಲ್ಲಿ 29 ಜನರಿಗೆ ಗಾಯಗಳಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲಿದೆ ಎಂದು ಭರವಸೆ ನೀಡಿದ್ದಾರೆ.
ನ್ಯೂಯಾರ್ಕ್ ಮೇಯರ್ ಬಿಲ್ ಡೆ ಬ್ಲಾಸಿಯೋ ಮಾತನಾಡಿ, ಸ್ಫೋಟದಲ್ಲಿ 29 ಜನರಿಗೆ ಗಾಯಗಳಾಗಿದ್ದು, ಒಬ್ಬರ ಸ್ಥಿತಿ ಮಾತ್ರ ಗಂಭೀರವಾಗಿದೆ. ಕೃತ್ಯದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ